ಜಯನಗರ ವಿಧಾನಸಭಾ ಚುನಾವಣೆ, ಮತದಾನ ಆರಂಭ (Live)

ಈ ಸುದ್ದಿಯನ್ನು ಶೇರ್ ಮಾಡಿ

Jayanagar--Election

ಬಂಗಳೂರು, ಜೂ.11-ಅಭ್ಯರ್ಥಿ ಅಕಾಲಿಕ ಮರಣದಿಂದ ಮುಂದೂಡಲ್ಪಟ್ಟಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಇಂದು ಚುನಾವಣೆಗೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಕ್ಷೇತ್ರದ 216 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ 10 ಕಂಪೆನಿ ಅರೆಸೇನಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಎರಡಕ್ಕಿಂತ ಹೆಚ್ಚು ಮತಗಟ್ಟೆಗಳಿರುವ 66 ಮತಗಟ್ಟೆಗಳಿದ್ದು ಎಲ್ಲ ಮತಗಟ್ಟೆಗಳಿಗೆ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಉಳಿದ ಮತಗಟ್ಟೆಗಳಿಗೆ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. 10 ಚೆಕ್‍ ಪೋಸ್ಟ್‍ಗಳು, 25 ಫ್ಲೈಯಿಂಗ್ ಸ್ಕ್ವಾಡ್, 16 ಪೊಲೀಸ್ ಸ್ಕ್ವಾಡ್, 6 ಸೂಪರ್‍ವೈಸಿಂಗ್ ಸ್ಕ್ವಾಡ್‍ಗಳನ್ನು ಚುನಾವಣಾ ಭದ್ರತಾ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ಆರು ಜನ ಎಸಿಪಿ, ಇಬ್ಬರು ಡಿಸಿಪಿ, 10 ಕೆಎಸ್‍ಆರ್‍ಪಿ, ಸಿಎಆರ್ ಫ್ಲಟೂನ್‍ಗಳನ್ನು ಭದ್ರತೆಗೆ ಹಾಕಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಕಳೆದ ಮೇ 12ರಂದು ನಡೆಯಬೇಕಿದ್ದ ಚುನಾವಣೆ ಇಲ್ಲಿನ ಬಿಜೆಪಿ ಅಭ್ಯರ್ಥಿಯಾಗಿದ್ದ ವಿಜಯ್‍ಕುಮಾರ್ ಅವರ ಅಕಾಲಿಕ ಮರಣದಿಂದ ಮುಂದೂಡಲ್ಪಟ್ಟಿತ್ತು. ಈಗ ಅವರ ಪರವಾಗಿ ಅವರ ಸೋದರ ಪ್ರಹ್ಲಾದ್ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್‍ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಕಣದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಕಾಳೇಗೌಡ ಅವರು ಕಣದಿಂದ ನಿವೃತ್ತಿಯಾಗಿ ಕಾಂಗ್ರೆಸ್‍ಗೆ ಬೆಂಬಲ ಘೋಷಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ರವಿಕೃಷ್ಣರೆಡ್ಡಿ ಅವರು ಕಣದಲ್ಲಿದ್ದಾರೆ.

Facebook Comments

Sri Raghav

Admin