ಹೌಸ್‍ಕೀಪಿಂಗ್ ವ್ಯಕ್ತಿಗೆ ಕೊರೊನಾ, ಜಯನಗರ ಜನರಲ್ ಆಸ್ಪತ್ರೆ ಸೀಲ್‍ಡೌನ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.12- ಹೌಸ್‍ಕೀಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಯನಗರದ ಜನರಲ್ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಅಲ್ಲದೆ, ಈ ವ್ಯಕ್ತಿಯ ಜತೆ ಪ್ರಥಮ ಸಂಪರ್ಕದಲ್ಲಿದ್ದ 16 ಜನರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಆಸ್ಪತ್ರೆಯನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಿ ಬಳಿಕ ರೋಗಿಗಳಿಗೆ ಮತ್ತೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಕೂಡಲೇ ಅಲರ್ಟ್ ಆದ ಅಧಿಕಾರಿಗಳು ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಿ ಸಂಪೂರ್ಣ ಸ್ಯಾನಿಟೈಜ್ ಮಾಡಿ ನಂತರ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದರು. ಸೋಂಕಿತ ವ್ಯಕ್ತಿಯನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಆತನ ಸಂಪರ್ಕದಲ್ಲಿದ್ದವರನ್ನೆಲ್ಲ ಕ್ವಾರಂಟೈನ್‍ಗೆ ಒಳಪಡಿಸಿದ್ದಾರೆ.

Facebook Comments