ಕಲ್ಲಿನಿಂದ ಜಜ್ಜಿ ಜೆಸಿಬಿ ಚಾಲಕನ ಭೀಕರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಗಾವಿ, ಜೂ.13- ಜೆಸಿಬಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕನನ್ನು ಥಳಿಸಿ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಸವದತ್ತಿ ತಾಲ್ಲೂಕು ಕಾತರಾಳ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವನನ್ನು ಶ್ರೀಕಾಂತ್ ಕಳ್ಳೀಮನೆ (25) ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ಕೆಲಸದ ನಿಮಿತ್ತ ತನ್ನ ಜೆಸಿಬಿ ವಾಹನವನ್ನು ತೆಗೆದುಕೊಂಡು ಸವದತ್ತಿ ಪಟ್ಟಣದ ಕಡೆಗೆ ಹೋಗುವಾಗ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿದ್ದಾರೆ.

ನೋಡು ನೋಡುತ್ತಿದ್ದಂತೆ ಆತನನ್ನು ವಾಹನದಿಂದ ಕೆಳಗಿಳಿಸಿ ಮನ ಬಂದಂತೆ ಥಳಿಸಿದ್ದಾರೆ. ಆತ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬೆಂಬಿಡದೆ ಆತನನ್ನು ಹಿಡಿದು ಕಲ್ಲಿನಿಂದ ತಲೆ ಜಜ್ಜಿ ಹತ್ಯೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಸವದತ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ