ಹಿರೇಕೆರೂರಿನಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಜೆಡಿಎಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.20- ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದ ಕಬ್ಬಿನ ಕಾಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ

ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಉಜನೆಪ್ಪ ಅವರೇ ಪಕ್ಷದ ಅಭ್ಯರ್ಥಿ ಎಂದು ಜೆಡಿಎಸ್ ಘೋಷಿಸಲಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಉಜನೆಪ್ಪ ಜಟ್ಟೆಪ್ಪ ಕೋಡಿಹಳ್ಳಿ ಅವರ ಹೆಸರನ್ನು ಜೆಡಿಎಸ್ ಪ್ರಕಟಿಸಿತ್ತು. ಆದರೆ, ನಾಮಪತ್ರ ಸಲ್ಲಿಕೆಯ ಕೊನೆ ದಿನ ಕೊನೆ ಗಳಿಗೆಯಲ್ಲಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಬಿ ಫಾರಂ ನೀಡಿ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿತ್ತು.

ಸ್ವಾಮೀಜಿ ನಾಮಪತ್ರ ಪರಿಶೀಲನೆ ನಂತರ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಪ್ರಕಟಿಸಿದ್ದಾರೆ. ಹೀಗಾಗಿ ಉಜನೆಪ್ಪ ಅವರನ್ನೇ ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಿಸಿ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Facebook Comments