2023ರ ವಿಧಾನಸಭೆ ಚುನಾವಣೆಗೆ 134 ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ : HDK

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.15- ಮುಂಬರುವ ವಿಧಾನಸಭೆ ಚುನಾವಣೆಗೆ 134 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಹೇಳಿದರು.  ಗುರುತಿಸಿರುವ ಅಭ್ಯರ್ಥಿಗಳನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸುವ ಉದ್ದೇಶ ನಮ್ಮದಾಗಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದಪಡಿಸಿದ್ದೇವೆ.

ಇದೇ ತಿಂಗಳ 28 ಮತ್ತು 29ರಂದು ಮೊದಲ ಪಟ್ಟಿಯ ಅಭ್ರ್ಯರ್ಥಿಗಳಿಗೆ ಬಿಡದಿಯ ನಮ್ಮ ತೋಟದಲ್ಲಿ ಕಾರ್ಯಾಗಾರ ಮಾಡಲಾಗುವುದು. ಆಯ್ಕೆ ಮಾಡಿದ ಅಭ್ಯರ್ಥಿಗಳಿಗೆ ಟಾಸ್ಕ್ ನೀಡಿ ಜನರ ಬಳಿ ಕಳಿಸಲಿದ್ದೇವೆ ಎಂದರು ಜೆ.ಪಿ.ಭವನದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್. ಡಿ. ದೇವೆಗೌಡರ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು, ಜಿಲ್ಲಾ ಮಟ್ಟದ ನಾಯಕರು ಹಾಗೂ ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪಕ್ಷದ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ನಡೆಸಿದ್ದೇವೆ. ಪ್ರತಿ ಜಿಲ್ಲಾ ಯಲ್ಲಿ ಪಕ್ಷ ಬಲವರ್ಧನೆಗೆ ಚರ್ಚೆ ನಡೆಸಿದ್ದೇವೆ. ಕಾಂಗ್ರೆಸ್ ಬೆಲೆ ಏರಿಕೆ ಚರ್ಚೆ ಮಾಡುತ್ತಿದೆ. ಬಿಜೆಪಿ ಆಡಳಿತದಲ್ಲಿದ್ದು ದೇವಾಲಯಗಳನ್ನು ಒಡೆಯುವ ಕೆಲಸವಾಗುತ್ತಿದೆ. ಇದು ಬಿ.ಜೆ.ಪಿಯ ಚುನಾವಣಾ ತಂತ್ರವಾಗಿದೆ ಹಾಗೂ ಇಬ್ಬಗೆಯ ನೀತಿಯಾಗಿದೆ ಎಂದು ಟೀಕಿಸಿದರು.

Facebook Comments