ಜೆಡಿಎಸ್ ಪಕ್ಷ ಸಂಘಟನೆಗೆ 7 ಹೊಸ ತಂಡ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜ.19-ಪಕ್ಷದ ಎಲ್ಲ ಸಮಿತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ನೂತನ ಸಮಿತಿ ರಚನೆ ಮಾಡುವ ಸಂಬಂಧ ಏಳು ತಂಡಗಳನ್ನು ಒಳಗೊಂಡ ವೀಕ್ಷಕರ ಸಮಿತಿಯನ್ನು ರಚಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.  ಪಕ್ಷದ ಕಚೇರಿಯಲ್ಲಿ ನಿನ್ನೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ನಡೆದ ಪಕ್ಷದ ಕೋರ್‍ಕಮಿಟಿ ಸಭೆಯಲ್ಲಿ ವಿಭಾಗವಾರು ವೀಕ್ಷಕರ ತಂಡಗಳನ್ನು ರಚನೆ ಮಾಡಲಾಗಿದೆ.

ಈ ತಂಡಗಳು ಪಕ್ಷದ ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಲಿವೆ. ಜನವರಿ ಅಂತ್ಯದ ವೇಳೆಗೆ ಆಯಾ ವಿಭಾಗಗಳ ವೀಕ್ಷಕರ ತಂಡಗಳು ಪ್ರವಾಸ ಕೈಗೊಂಡು ಪ್ರತಿದಿನ ಎರಡು ಜಿಲ್ಲೆಯಲ್ಲಿ ಹಳೆಯ ಸಮಿತಿ ಹಾಗೂ ಪಕ್ಷದ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿವೆ ಎಂದು ಅವರು ತಿಳಿಸಿದರು.  ಸಂಗ್ರಹಿಸಿದ ಅಭಿಪ್ರಾಯದ ಆಧಾರದ ಮೇಲೆ ತಾತ್ಕಾಲಿಕ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ಸದಸ್ಯತ್ವ ನೋಂದಣಿ ಪ್ರಕ್ರಿಯೆ ಮುಗಿದ ನಂತರ ಪಕ್ಷದ ನಿಯಮಗಳ ಪ್ರಕಾರ ಸಮಿತಿಯಲ್ಲಿ ಅಗತ್ಯಬಿದ್ದರೆ ಬದಲಾವಣೆ ಮಾಡಲಾಗುವುದು. ಇಲ್ಲದಿದ್ದರೆ ತಾತ್ಕಾಲಿಕ ಸಮಿತಿಯನ್ನೇ ಖಾಯಂಗೊಳಿಸಲು ತೀರ್ಮಾನಿಸಲಾಗಿದೆ ಎಂದರು.

ಸಮಿತಿ ಸದಸ್ಯರನ್ನು ಆಯ್ಕೆ ಮಾಡುವಾಗ ಜಾತಿವಾರು, ಪ್ರಾಂತ್ಯವಾರು, ದಕ್ಷತೆ, ಉತ್ಸಾಹ, ಪಕ್ಷದಲ್ಲಿನ ಕ್ರಿಯಾಶೀಲತೆ ಮೊದಲಾದ ಅಂಶಗಳನ್ನು ಗಮನಿಸಬೇಕಾಗುತ್ತದೆ ಎಂದು ಹೇಳಿದರು.  ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ತಾವು ಜನವರಿ 30 ಮತ್ತು 31ರಂದು ಕಲ್ಯಾಣ ಕರ್ನಾಟಕ ಹಾಗೂ ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಅದೇ ರೀತಿ ಉಳಿದ ವಿಭಾಗಗಳ ವೀಕ್ಷಕರು ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಸದ್ಯದಲ್ಲಿಯೇ ಪಕ್ಷದ ನೂತನ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲುಸ್ತುವಾರಿಯಲ್ಲಿ ಶಾಸಕರಾದ ಬಂಡೆಪ್ಪ ಕಾಶಂಪೂರ್, ನಾಗನಗೌಡ ಕಂದಕೂರ್, ವೆಂಕಟರಾವ್ ನಾಡಗೌಡ, ರಾಜ ವೆಂಕಟಪ್ಪ ನಾಯಕ್ ದೊರೆ, ಮಾಜಿ ಸಚಿವ ಎನ್.ಎಂ.ನಬಿ ಅವರನ್ನು ವೀಕ್ಷಕರಾಗಿ ನೇಮಿಸಲಾಗಿದೆ.

ಬೆಳಗಾವಿ ವಿಭಾಗಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲುಸ್ತುವಾರಿಯಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ, ಶಾಸಕ ದೇವಾನಂದ ಚೌಹಾಣ್, ಮಾಜಿ ಸಚಿವ ಆನಂದ್ ಅಸ್ನೋಟಿಕರ್,ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಬೀಮಪ್ಪ ಗುಂಡಪ್ಪ ಗಡದ, ಅಶೋಕ ನಿಂಗಯ್ಯ ಪೂಜಾರಿ, ನಾಸೀರ್ ಭಗವಾನ್, ಮಂಗಳಾದೇವಿ ಆರ್.ಬಿರಾದಾರ್, ಮಲ್ಲಿಕಾರ್ಜುನ ಯೆಂಡಿಗೆರಿ, ಹನುಮಂತಪ್ಪ ಮಾವಿನಮರದ ಅವರನ್ನು ನಿನ್ನೆ ನಡೆದ ಸಭೆಯಲ್ಲಿ ವೀಕ್ಷಕರನ್ನಾಗಿ ನೇಮಕ ಮಾಡುವ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಮೈಸೂರು ವಿಭಾಗಕ್ಕೆ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಶಾಸಕರಾದ ಎಂ.ಅಶ್ವಿನ್‍ಕುಮಾರ್, ಡಾ.ಕೆ.ಅನ್ನದಾನಿ, ಮಾಜಿ ಶಾಸಕ ಚಿಕ್ಕಣ್ಣ, ಪಕ್ಷದ ಮುಖಂಡರಾದ ಮೊಹಮ್ಮದ್ ಜಫ್ರುಲ್ಲಾ ಖಾನ್, ಅಬ್ದುಲ್ ಅಜೀಜ್ ಅಬ್ದುಲ್ಲಾ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೊಡುಗು ಜಿಲ್ಲೆಗಳಿಗೆ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕರಾದ ವೈ.ಎಸ್.ವಿ.ದತ್ತ, ಎಚ್.ಎಸ್.ಶಿವಶಂಕರ್, ಶಾರದ ಪೂರ್ಯಾ ನಾಯಕ್, ಡಿ.ಯಶೋಧರ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಶಾಸಕ ಎಂ.ಕೃಷ್ಣಾ ರೆಡ್ಡಿ, ವಿಧಾನಪರಿಷತ್ ಸದಸ್ಯ ಗೋವಿಂದರಾಜು, ಮಾಜಿ ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಕೆ.ಪಿ.ಬಚ್ಚೇಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಆರ್.ಚೌಡರೆÀಡ್ಡಿ ತೂಪಲ್ಲಿ, ರವಿಕುಮಾರ್, ಸಮೃದ್ದಿ ಮಂಜುನಾಥ್, ಕೆ.ವಿ.ಅಮರನಾಥ್ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.
ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ಎಲ್.ಎನ್.ನಾರಯಣಸ್ವಾಮಿ, ಎ.ಮಂಜುನಾಥ್,

ಎಂ.ವಿ.ವೀರಭದ್ರಯ್ಯ, ಡಿ.ಸಿ.ಗೌರಿಶಂಕರ್, ಮಾಜಿ ಶಾಸಕರಾದ ಸಿ.ಡಿ.ಸುರೇಶ್ ಬಾಬು, ಕೆ.ಎಂ.ತಿಮ್ಮರಾಯಪ್ಪ ಹಾಗೂ ಚನ್ನರಾಜು ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಮಹಾನಗರಕ್ಕೆ ಸಂಬಂಧಿಸಿದಂತೆ ಶಾಸಕ ಆರ್.ಮಂಜುನಾಥ್, ಮಾಜಿ ಸಂಸದ ಕುಪೇಂದ್ರರೆಡ್ಡಿ, ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ, ಬೆಂಗಳೂರುನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಪಕ್ಷದ ಮುಖಂಡರಾದ ವಿ.ನಾರಾಯಣಸ್ವಾಮಿ, ಮೊಹಮ್ಮದ್ ಜಫ್ರುಲ್ಲಾ ಖಾನ್, ಸಯ್ಯದ್ ಸಫೀವುಲ್ಲಾ ಸಾಹೇದ್, ರೂತ್ ಮನೋರಮಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದರು.

Facebook Comments