ಯಶವಂತಪುರ-ಮಹಾಲಕ್ಷ್ಮೀಲೇಔಟ್ ಕ್ಷೇತ್ರಗಳ ಜೆಡಿಎಸ್ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23-ರಾಜ್ಯ ವಿಧಾನಸಭೆ ಉಪಚುನಾವಣೆ ಸಿದ್ಧತೆ ಕುರಿತಂತೆ ಇಂದು ಸಂಜೆ ಜೆಡಿಎಸ್ ಮಹತ್ವದ ಸಭೆ ನಡೆಯಲಿದೆ. ಜೆ.ಪಿ.ಭವನದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರಗಳ ಸಭೆಯನ್ನು ಪ್ರತ್ಯೇಕವಾಗಿ ನಡೆಸಲಿದ್ದಾರೆ.

ಬೆಂಗಳೂರು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಒಳಗೊಂಡಂತೆ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಪಕ್ಷದ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಆರ್.ಪ್ರಕಾಶ್, ಉಪಮೇಯರ್ ಭದ್ರೇಗೌಡ, ಪಕ್ಷದ ಮುಖಂಡ ಆರ್.ವಿ.ಹರೀಶ್ ಮತ್ತಿತರರು ಆಕಾಂಕ್ಷಿಗಳಾಗಿದ್ದಾರೆ.

ನಂತರ ಯಶವಂತಪುರ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆಯನ್ನು ಕುಮಾರಸ್ವಾಮಿಯವರು ನಡೆಸಲಿದ್ದಾರೆ. ಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಕ್ಷದ ಮುಖಂಡರಾದ ಜವರಾಯಿಗೌಡ ಅವರು ಸ್ಪರ್ಧಿಸುವಂತೆ ಯಶವಂತಪುರ ಕ್ಷೇತ್ರದ ಕಾರ್ಯಕರ್ತರ ಒತ್ತಾಯವಿದೆ. ಆದರೆ ಜವರಾಯಿಗೌಡರು ಸ್ಪರ್ಧೆ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಪ್ರಕಟಿಸಿಲ್ಲ.

ಪಕ್ಷದ ಮತ್ತೊಬ್ಬ ಮುಖಂಡರಾದ ಹನುಮಂತೇಗೌಡ ಅವರು ಸ್ಪರ್ಧೆಗಿಳಿಯಲು ಆಸಕ್ತಿ ಹೊಂದಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ಕೊನೆ ಘಳಿಗೆಯಲ್ಲಿ ಯಾರನ್ನು ಕಣಕ್ಕಿಳಿಸಲಿದ್ದಾರೆ ಎಂಬುದನ್ನು ಕಾದುನೋಡಬೇಕು.  ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸ್ಥಳೀಯರನ್ನೇ ಕಣಕ್ಕಿಳಿಸುವುದಾಗಿ ಈಗಾಗಲೇ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುವ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ