ಉಪಚುನಾವಣೆಗೆ ಜಿಲ್ಲಾ ಉಸ್ತುವಾರಿ ಹಾಗೂ ವೀಕ್ಷಕರನ್ನು ನೇಮಕ ಮಾಡಿದ ಜೆಡಿಎಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.21- ರಾಜ್ಯ ವಿಧಾನಸಭೆ ಉಪಚುನಾವಣೆಗೆ ಜೆಡಿಎಸ್ ಜಿಲ್ಲಾ ಉಸ್ತುವಾರಿ ಹಾಗೂ ವೀಕ್ಷಕರನ್ನು ನೇಮಕ ಮಾಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 8ರಿಂದ 12 ಮಂದಿ ಮುಖಂಡರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದರೆ 3ರಿಂದ 4 ಮಂದಿ ಮುಖಂಡರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ ಅವರು ಉಪಚುನಾವಣೆಯ ಕ್ಷೇತ್ರವಾರು ಉಸ್ತುವಾರಿಗಳು ಹಾಗೂ ವೀಕ್ಷಕರನ್ನು ನೇಮಕ ಮಾಡಿ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 13 ವಿಧಾನಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಹುಣಸೂರಿಗೆ ಮಾಜಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರಜ್ವಲ್ ರೇವಣ್ಣ, ಶಾಸಕರಾದ ಕೆ.ಮಹದೇವ್, ಅಶ್ವಿನ್‍ಕುಮಾರ್ ಕೆ.ಆರ್.ಪೇಟೆಗೆ ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಬಿ.ಬಿ.ನಿಂಗಯ್ಯ, ರಾಜ್ಯ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.

ಮಹಾಲಕ್ಷ್ಮಿ ಲೇಔಟ್‍ಗೆ ಮಾಜಿ ಸಚಿವ ಜಿ.ನಾಗರಾಜಯ್ಯ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ನಾರಾಯಣಸ್ವಾಮಿ, ಯಶವಂತಪುರಕ್ಕೆ ಶಾಸಕರಾದ ಆರ್.ಮಂಜುನಾಥ್, ಬಿ.ಸತ್ಯನಾರಾಯಣ, ಎನ್.ಅಪ್ಪಾಜಿಗೌಡ, ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ, ಇ.ಕೃಷ್ಣಪ್ಪ ಅವರನ್ನು ನೇಮಕ ಮಾಡಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ವಿಧಾನಸಭೆಯ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಶಾಸಕರಾದ ಎಲ್.ಎನ್.ನಾರಾಯಣಸ್ವಾಮಿ, ಆರ್.ಚೌಡರೆಡ್ಡಿ ತೂಪಲ್ಲಿ, ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಶಿವಾಜಿನಗರಕ್ಕೆ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಜಫ್ರುಲ್ಲಾ ಖಾನ್, ಯಲ್ಲಾಪುರಕ್ಕೆ ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಆನಂದ್ ಆಸ್ನೋಟಿಕರ್, ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ, ಪಕ್ಷದ ಮುಖಂಡರಾದ ಗಣಪಯ್ಯ.ಎಂ ಗೌಡ, ಗಂಗಣ್ಣ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಕೆ.ಆರ್.ಪುರಂಗೆ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ಎಚ್.ಎಂ.ರಮೇಶ್‍ಗೌಡ, ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ವಿ.ಅಮರನಾಥ್, ವಿಜಯನಗರಕ್ಕೆ ಶಾಸಕರಾದ ರಾಜ ವೆಂಕಟಪ್ಪ ನಾಯಕ, ಮಾಜಿ ಶಾಸಕ ಎನ್.ಟಿ.ಗೋಪಣ್ಣ, ರಾಜ್ಯ ಯುವ ಜನತಾದಳದ ಕಾರ್ಯಾಧ್ಯಕ್ಷ ಶರಣಗೌಡ ಕಂದಕೂರು ಅವರು ನೇಮಕವಾಗಿದ್ದರೆ , ರಾಣೆಬೆನ್ನೂರಿಗೆ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ, ಎಂಎಲ್‍ಸಿ ತಿಪ್ಪೇಸ್ವಾಮಿ, ಪಕ್ಷದ ಮುಖಂಡರಾದ ಗುರುರಾಜ ಹುಣಸಿ ಮರದ್, ಹನುಮಂತ ಮಾವಿನಮರದ ಅವರನ್ನು ನೇಮಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಕಾಗವಾಡ, ಅಥಣಿ ಹಾಗೂ ಗೋಕಾಕ್ ಕ್ಷೇತ್ರಗಳಿಗೆ ಮಾಜಿ ಸಚಿವರಾದ ಬಂಡೆಪ್ಪ ಕಾಶ್ಯಂಪುರ್, ಬಸವರಾಜ್ ಹೊರಟ್ಟಿ, ಲೀಲಾದೇವಿ ಆರ್.ಪ್ರಸಾದ್, ಎಂ.ಸಿ.ಮನಗುಳಿ, ಮಾಜಿ ಶಾಸಕ ಎಚ್.ಸಿ.ನೀರಾವರಿ, ಶಾಸಕರಾದ ದೇವಾನಂದ್ ಚವ್ಹಾಣ್, ನಾಗನಗೌಡ ಕಂದಕೂರು, ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ನಾಸೀರ್ ಭಗವಾನ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.

ಇದೇ ರೀತಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪಕ್ಷದ ಮಾಜಿ ಸಚಿವರು, ಶಾಸಕರು ಮುಖಂಡರಿಗೆ ಉಸ್ತುವಾರಿ ನೀಡಲಾಗಿದೆ. ನೇಮಕವಾಗಿರುವ ವೀಕ್ಷಕರು ಹಾಗೂ ಉಸ್ತುವಾರಿಗಳು ನಾಳೆಯಿಂದ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook Comments

Sri Raghav

Admin