ಸಾಮಾಜಿಕ ಜಾಲ ತಾಣಗಳಲ್ಲಿ ಜೆಡಿಎಸ್ ವಿರುದ್ಧ ಅಪಪ್ರಚಾರ : ಆಯೋಗಕ್ಕೆ ದೂರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.21- ಫೇಸ್‍ಬುಕ್ ಮತ್ತು ಟ್ವಿಟರ್‍ಗಳಲ್ಲಿ ನಕಲಿ ಪೇಜ್ ತೆರೆದು ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್‍ನ ಕಾನೂನು ವಿಭಾಗದ ಪ್ರಧಾನಕಾರ್ಯದರ್ಶಿ ಎಸ್.ಪಿ.ಪ್ರದೀಪ್‍ಕುಮಾರ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ದೇವು ಬಿನ್ ಮುದ್ದೇಗೌಡ ಪೇಜ್ ತೆರೆದು ಜೆಡಿಎಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ಗಳನ್ನು ಮಾಡಲಾಗುತ್ತಿದೆ. ಉಪ ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧ ಈ ಪೇಜ್ ಮೂಲಕ ಅಪಪ್ರಚಾರ ನಡೆಯುತ್ತಿದೆ. ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೂಡಲೇ ಈ ಪೇಜ್ ಸ್ಥಾಪಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Facebook Comments