ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಜೆಡಿಎಸ್ ನಾಯಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.2- ರಾಜ್ಯದಲ್ಲಿ ಸಂಭವಿಸಿರುವ ಮಳೆ ಹಾನಿ ಪ್ರದೇಶಗಳಿಗೆ ಸದ್ಯದಲ್ಲೇ ಜೆಡಿಎಸ್ ನಾಯಕರು ಭೇಟಿ ನೀಡಲಿದ್ದಾರೆ. ಉತ್ತರ ಕರ್ನಾಟಕ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪ್ರವಾಹ, ಅತಿವೃಷ್ಟಿ ಸಂಭವಿಸಿದ್ದು, ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅಂತಹ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ನಾಯಕರು ಭೇಟಿ ನೀಡಲಿದ್ದಾರೆ.

ಪ್ರವಾಹ ಹಾಗೂ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳು, ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದು ವೀಕ್ಷಿಸಲಿದ್ದಾರೆ ಹಾಗೂ ಸಂಕಷ್ಟದಲ್ಲಿರುವ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Facebook Comments