ರೆಸಾರ್ಟ್‍ನಿಂದ ಒಟ್ಟಾಗಿ ವಿಧಾನಸೌಧಕ್ಕೆ ಬಂದ ಜೆಡಿಎಸ್ ಶಾಸಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.12- ಕಳೆದ ನಾಲ್ಕು ದಿನಗಳಿಂದ ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ಬೀಡುಬಿಟ್ಟಿದ್ದ ಜೆಡಿಎಸ್ ಶಾಸಕರು ಇಂದು ಒಟ್ಟಾಗಿ ವಿಧಾನಸೌಧಕ್ಕೆ ಆಗಮಿಸಿದರು.

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗುವ ಮುನ್ನ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ಸೇರಿ ಅಧಿವೇಶನ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಶಾಸಕರು ಸಮಾಲೋಚನೆ ನಡೆಸಿದರು.

ಶಾಸಕಾಂಗ ಪಕ್ಷದ ನಾಯಕರೂ ಆದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಸಕ್ತ ಅಧಿವೇಶನದಲ್ಲಿ ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಯಿತು.

ಆಡಳಿತ ಪಕ್ಷದ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಶಾಸಕರು ಎಂದಿನಂತೆ ಒಗ್ಗಟ್ಟಿನಿಂದ ಇರಬೇಕು. ಮೈತ್ರಿ ಸರ್ಕಾರ ಸುಭದ್ರವಾಗಿರುತ್ತದೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಮಾರಸ್ವಾಮಿ ಶಾಸಕರಿಗೆ ಭರವಸೆ ನೀಡಿದ್ದಾರೆ.

ವಿಧಾನಸಭೆಯ ಕಾರ್ಯ-ಕಲಾಪಗಳಲ್ಲಿ ಪಾಲ್ಗೊಂಡು ಪ್ರತಿಪಕ್ಷ ಬಿಜೆಪಿ ಎತ್ತುವ ವಿಚಾರಗಳಿಗೆ ಪ್ರತಿಯಾಗಿ ಸೂಕ್ತ ಸಮರ್ಥನೆ ನೀಡುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin