ಎಪಿಎಂಸಿ-ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಸಿ ನಾಳೆಯಿಂದ ಜೆಡಿಎಸ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.13- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನ ವಿರೋ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕೈಗಾರಿಕೆ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ವಿರೋಸಿ ನಾವು ನಾಳೆಯಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದಲೇ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ನಾಳೆ ಹಾಸನದಲ್ಲಿ ಸಾಂಕೇತಿಕವಾಗಿ ಹೋರಾಟವನ್ನು ಆರಂಭಿಸುತ್ತೇವೆ ಎಂದರು.

ಹಾಸನ ಜಿಲ್ಲೆಯ ಎಲ್ಲಾ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ಇನ್ನೂರು ಜನ ಮಾತ್ರ ಸೇರಿ ಪ್ರತಿಭಟನೆ ಮಾಡುತ್ತೇವೆ. ಘೋಷಣೆಗಳನ್ನು ಕೂಗುವುದಿಲ್ಲ. ಪ್ರತಿಭಟನೆ ನಂತರ ಜಿಲ್ಲಾಕಾರಿಗೆ ಮನವಿ ಕೊಡುತ್ತೇವೆ. ನಮ್ಮ ಪಕ್ಷದಲ್ಲಿ ಈ ಹೋರಾಟದ ಬಗ್ಗೆ ಯಾವುದೇ ಒಡಕಿಲ್ಲ. ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರ ತಂದಿರುವ ಮೂರು ಕಾಯ್ದೆಗಳಿಗೆ ನಮ್ಮ ಸಮ್ಮತಿ ಇಲ್ಲ. ಈ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಅನುಷ್ಠಾನಕ್ಕೆ ತಂದಿದ್ದಾರೆ. ಇದನ್ನು ವಿರೋಸಿ ಜೆಡಿಎಸ್ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸೇರಿದಂತೆ ಬೆರಳೆಣಿಕೆ ಮಂದಿ ಮಾತ್ರ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ಕಡೆ ಕುಳಿತುಕೊಂಡು ಪ್ರತಿಭಟನೆ ಮಾಡುತ್ತೇವೆ ಎಂದರು.

ಭೂ ಸುಧಾಕರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳು ರೈತರಿಗೆ ಮಾರಕ. ಸಣ್ಣ, ಮಧ್ಯಮ ವರ್ಗದ ರೈತರಿಗೆ ಅನ್ಯಾಯವಾಗುತ್ತದೆ. ಜಮೀನು ಪಡೆದು ಮುಂದೆ ಮಾರಾಟ ಮಾಡಬಹುದು. ಈ ಕಾಯ್ದೆಯಿಂದ ರೈತರಿಗೆ ಅನಾನುಕೂಲವೇ ಹೆಚ್ಚು ಎಂದು ಹೇಳಿದರು.

30 ಜಿಲ್ಲೆಗೆ ನಾನೇ ಹೋಗೋಕೆ ಆಗೊಲ್ಲ. ರಾಜ್ಯಾಧ್ಯಕ್ಷರು, ಆಯಾ ಭಾಗದ ಶಾಸಕರು, ಮಾಜಿ ಶಾಸಕರು, ಪರಿಷತ್ ಸದ್ಯಸರು ಜಿಲ್ಲೆಗಳಲ್ಲಿ ಹೋರಾಟ ಮಾಡುತ್ತಾರೆ.

ಬೆಂಗಳೂರಿನ ಗಲಭೆ ಪ್ರಕರಣವನ್ನು ಸಿಬಿಐಗೆ ವಹಿಸಿ ಅಂತ ಶಾಸಕ ಅಖಂಡ ಶ್ರೀನಿವಾಸ್ ಹೇಳಿದ್ದಾರೆ. ಈಗಿರೋ ಆಯುಕ್ತರು ಸಿಬಿಐನಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರು ತಾರತಮ್ಯ ಮಾಡೊಲ್ಲ. ಆದರೆ, ಅಂತಿಮ ನಿರ್ಧಾರ ಸರ್ಕಾರ ತೆಗೆದುಕೊಳ್ಳಲಿ. ನಿಜವಾದ ಕಿಡಿಗೇಡಿಗಳ ವಿರುದ್ದ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ದೇವೇಗೌಡರು ಆಗ್ರಹಿಸಿದರು.

ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲಿನ ದಾಳಿ ಪ್ರಕರಣ ದುರದೃಷ್ಟಕರ. ದೇಶದ ಯಾವ ಭಾಗದಲ್ಲೂ ಇಂಥ ಪ್ರಕರಣ ನಡೆಯಬಾರದು. ದೊಂಬಿ, ಗಲಾಟೆ ಘಟನೆ ಸಂಬಂಧ 150 ಮಂದಿಯನ್ನು ಪೊಲೀಸರು ಬಂಸಿದ್ದಾರೆ.

ಇವರಲ್ಲಿ ನಿಜವಾದ ಅಪರಾಗಳು ಎಷ್ಟು ? ಇವರಲ್ಲಿ ಎಲ್ಲರೂ ಅಪರಾಗಳು ಇರಲಿಕ್ಕೆ ಸಾಧ್ಯವಿಲ್ಲ. ತಪ್ಪಿತಸ್ಥರನ್ನು ಮಾತ್ರ ಘಟನೆಗೆ ಹೊಣೆಗಾರರನ್ನಾಗಿ ಮಾಡಿ.ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ನಿರಪರಾಗಳಿಗೆ ಶಿಕ್ಷೆ ಬೇಡ ಎಂದರು.

ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಮುಖಂಡರಾದ ಜಫ್ರುಲ್ಲಾ ಖಾನ್, ಟಿ.ಎ.ಶರವಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook Comments

Sri Raghav

Admin