ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಅ.10-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಒದಗಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಜೆಡಿಎಸ್ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿತು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಶೇಷಾದ್ರಿ ರಸ್ತೆಯ ಮಹಾತ್ಮಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಪಾದಯಾತ್ರೆ ನಡೆಸಲಾಯಿತು.

ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನೀಡಲಾಗಿದ್ದ ಅನುದಾನವನ್ನು ಕಡಿತ ಮಾಡಿರುವುದನ್ನು ಖಂಡಿಸಲಾಯಿತು. ಅಲ್ಲದೆ, ನೆರೆ ಪೀಡಿತ ಪ್ರದೇಶಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮನೋಭಾವ ತಾಳಿವೆ ಎಂದು ಆರೋಪಿಸಲಾಯಿತು. ಇದೇ ವೇಳೆ ಜೆಡಿಎಸ್ ಕಚೇರಿ ಜೆ.ಪಿ. ಭವನದಿಂದ ಹೊರಟ ಪಕ್ಷದ ಮುಖಂಡರು, ಕಾರ್ಯಕರ್ತರು ಶೇಷಾದ್ರಿರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.  ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಪ್ರವಾಹದಿಂದಾಗಿ ಮನೆ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಬೆಳೆ ಹಾನಿಯಾಗಿದೆ. ನೆರೆಯಿಂದ ಸಂಕಷ್ಟಕ್ಕೀಡಾಗಿರುವ ಜನರಿಗೆ ತುರ್ತು ಪರಿಹಾರ ಒದಗಿಸುತ್ತಿಲ್ಲ ಎಂದು ಪ್ರತಿಭಟನಾ ನಿರತರು ಆಕ್ರೋಶವ್ಯಕ್ತಪಡಿಸಿದರು.

ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್‍ಬಾಬು, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ, ಬೆಂಗಳೂರು ಮಹಾನಗರ ಜೆಡಿಎಸ್ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಮಾಜಿ ಸಚಿವರು, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ