ಜೆಡಿಎಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್ ಕೊರೋನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 7-ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ (55)ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದಾರೆ‌. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ವಿಕ್ಟೋರಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯ ಚಟುವಟಿಗಳಲ್ಲಿ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು.ಆನಂದ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಬೇಸರವಾಯಿತು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ಭಗವಂತ ಅವರ ಕುಟುಂಬದ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.ಆನಂದ ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅವರಯ ಪ್ರಾರ್ಥಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಹಲವು ಮುಖಂಡರು ಆನಂದ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Facebook Comments

Sri Raghav

Admin