ಗೌಡರ ಕುಟುಂಬದ ಜೊತೆ ‘ಕೈ’ಜೋಡಿಸಿದರೆ ಯಾರಿಗೂ ನೆಮ್ಮದಿ ಇರಲ್ಲ : ವಿ.ಸೋಮಣ್ಣ

ಈ ಸುದ್ದಿಯನ್ನು ಶೇರ್ ಮಾಡಿ

Somanna--01

ತುಮಕೂರು, ಮೇ 29- ದೇವೇಗೌಡರ ಜತೆ ಸೇರಿ ಆಡಳಿತ ನಡೆಸಲು ಹೊರಟರೆ ಯಾರಿಗೂ ನೆಮ್ಮದಿ ಇರಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಹೇಳಿದ್ದಾರೆ. ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಜನ ಬೆಂಬಲ ನೀಡಿದ್ದಾರೆ. ದುರಾಡಳಿತ ನಡೆಸಿದ ಕಾಂಗ್ರೆಸ್ ಅನ್ನು ಸೋಲಿಸಿದ್ದಾರೆ. ಆದರೆ ಈಗ ಜೆಡಿಎಸ್ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯಭಾರ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.  ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಅವರ ಮನೆಯವರ್ಯಾರೂ ಯಾರನ್ನು ನೆಮ್ಮದಿಯಿಂದ ಇರಲು ಬಿಡುವುದಿಲ್ಲ. ನಾನು ಕೂಡ ದೇವೇಗೌಡರ ಗರಡಿಯಲ್ಲೇ ಬೆಳೆದವನು. ನನಗೆ ಎಲ್ಲವೂ ಅರ್ಥವಾಗುತ್ತದೆ ಎಂದು ಹೇಳಿದರು.

ಈ ಮೈತ್ರಿ ಸರ್ಕಾರಕ್ಕೆ ಹೆಚ್ಚು ದಿನ ಆಯುಷ್ಯ ಇರುವುದಿಲ್ಲ ಎಂದು ಭವಿಷ್ಯ ನುಡಿದ ಅವರು, ಪ್ರಸ್ತುತ ಪ್ರಧಾನಿ ಮೋದಿ ಅವರು ಇದರ ಬಗ್ಗೆ ಪರಿಗಣಿಸಿದ್ದಾರೆ. ಮುಂದಿನ ದಿನಗಳಲ್ಲಿ ಪರಿಹಾರವನ್ನು ಸೂಚಿಸಿದ್ದಾರೆ. ಕೇಂದ್ರದಲ್ಲಿ ಈಗ ಪ್ರಧಾನಿ ಮೋದಿ ವಿರುದ್ಧ ಕೆಲವು ಪ್ರಾದೇಶಿಕ ಪಕ್ಷಗಳು ಒಗ್ಗೂಡುವ ನಾಟಕವಾಡಿದ್ದಾರೆ. ಆದರೆ ಅವರಿಗೆ ದೇಶಕ್ಕಿಂತ ಅಧಿಕಾರದ ಆಸೆಯೇ ಹೆಚ್ಚು ಎಂದು ಟೀಕಿಸಿದರು.

ಮೋದಿ ಅವರು ಇಡೀ ವಿಶ್ವಕ್ಕೆ ಭಾರತದ ಶಕ್ತಿಯನ್ನು ತೋರಿಸಿದ್ದಾರೆ. ಅವರ ಆಡಳಿತವನ್ನು ವಿದೇಶಿಗರು ಕೂಡ ಮೆಚ್ಚುತ್ತಾರೆ. ಆದರೆ ಕೆಲವರು ಟೀಕೆಯಲ್ಲೇ ಕಾಲ ಕಳೆಯುತ್ತಾರೆ ಎಂದು ವ್ಯಂಗ್ಯವಾಡಿದರು. ಮಹಾನಗರ ಪಾಲಿಕೆ ಸದಸ್ಯರಾದ ಬಾವಿಕಟ್ಟೆ ನಾಗಣ್ಣ, ಹೆಬ್ಬಾಕರ ರವಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

Facebook Comments

Sri Raghav

Admin