ಜೆಡಿಎಸ್ ಜಿಲ್ಲಾ ಮುಖಂಡರು, ಶಾಸಕರೊಂದಿಗೆ ಹೆಚ್ಡಿಕೆ ವೀಡಿಯೋ ಸಂವಾದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.3-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬಳ್ಳಾರಿ, ಬೀದರ್, ಜಿಲ್ಲಾ ಗಳ ಜಿಲ್ಲಾಧ್ಯಕ್ಷರು, ಶಾಸಕರು, ತಾಲೂಕು ಅಧ್ಯಕ್ಷರು ಮತ್ತು ಕಳೆದ ಬಾರಿ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳ ಅವಧಿಯು ಮುಗಿದಿದ್ದು, ಮುಂಬರುವ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟನೆ ಮಾಡುವ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಾಯಿತು.  ಇದೇ ವೇಳೆ ಪಂಚಾಯತಿ ಚುನಾವಣೆಗೆ ನಿಗದಿಪಡಿಸಿರುವ ಸ್ಥಾನ, ಮೀಸಲಾತಿ ರಾಜಕೀಯ ವೈರತ್ವ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಆರೋಪಿಸಿ ಹೋರಾಟ ನಡೆಸುವ ಬಗ್ಗೆಯೂ ಚರ್ಚಿಸಲಾಯಿತು.

ರಾಜ್ಯದಲ್ಲಿ ಭೀಕರ ಮಳೆ ಮತ್ತು ನೆರೆ ಹಾವಳಿಯಿಂದ ಬಾಧಿತವಾದ ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಲಾಯಿತು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.

Facebook Comments