ನಾಲ್ವರು ಮನೆಗಳ್ಳರ ಸೆರೆ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.27- ಮನೆ ಬಾಗಿಲು ಮೀಟಿ ನಗದು, ಚಿನ್ನಾಭರಣ ಕಳ್ಳತನ ಮಾಡಿದ್ದ ನಾಲ್ವರನ್ನು ಕಾಟನ್‍ಪೇಟೆ ಪೊಲೀಸರು ಬಂಧಿಸಿ 10 ಲಕ್ಷ ರೂ. ಬೆಲೆಯ ಚಿನ್ನಾಭರಣ, 12 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ನರಪತ್ ಸಿಂಗ್ (41), ಕಪೂರ್ ಸಿಂಗ್ (39) , ಪ್ರದೀಪ್ ವ್ಯಾಸ್ (46) ಮತ್ತು ಧನರಾಜ್ (48) ಬಂತರು.

ಜನವರಿ 11 ರಂದು ಹೊಲಿಗೆ ಯಂತ್ರ ರಿಪೇರಿಗೆಂದು ತಾಯಿ-ಮಗಳು ಹೊರಗೆ ಹೋಗಿದ್ದಾಗ ಕಳ್ಳರು ಇವರ ಮನೆಯ ಬಾಗಿಲು ಮೀಟಿ ಒಳನುಗ್ಗಿ ಚಿನ್ನದ ಒಡವೆಗಳು, ಬೆಳ್ಳಿಯ ಕಾಲ್ಬೈನು ಹಾಗೂ ಹಣ ಕಳ್ಳತನ ಮಾಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಮೊದಲು ಮೂವರನ್ನು ಬಂಸಿ ಇವರು ನೀಡಿದ ಹೇಳಿಕೆ ಮೇರೆಗೆ ಮತ್ತೊಬ್ಬ ಆರೋಪಿಯನ್ನು ಬಂಸಿದ್ದಾರೆ.

ಆರೋಪಿಗಳ ಬಂಧನದಿಂದ ಕಾಟನ್‍ಪೇಟೆ ಠಾಣೆಯಲ್ಲಿ ದಾಖಲಾಗಿದ್ದ 2 ಮನೆ ಕಳವು ಪ್ರಕರಣಗಳು , 1 ಸಾಮಾನ್ಯ ಕಳವು ಪ್ರಕರಣಗಳಿಗೆ ಸಂಬಂಸಿದಂತೆ 10 ಲಕ್ಷ ರೂ. ಬೆಲೆ ಬಾಳುವ 187 ಗ್ರಾಂ ಚಿನ್ನಾಭರಣ, 7 ಕೆ.ಜಿ 117 ಗ್ರಾಂ ಬೆಳ್ಳಿ ಆಭರಣಗಳು ಮತ್ತು 12 ಸಾವಿರ ಹಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments