ವ್ಯಕ್ತಿ ಬಂಧನ : 105 ಗ್ರಾಂ ಆಭರಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.1-ಸ್ಕೂಟರ್‍ನಲ್ಲಿ ಅನುಮಾನಾಸ್ಪದವಾಗಿ ಹೋಗುತ್ತಿದ್ದ ವ್ಯಕ್ತಿಯನ್ನು ಬಂಧಿಸಿ 5.30 ಲಕ್ಷ ರೂ. ಬೆಲೆಬಾಳುವ 105.7 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ರಾಜರಾಜೇಶ್ವರಿನಗರ ಠಾಣೆಪೊಲೀಸರು ವಶಪಡಿಸಿಕೊಂಡಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿ. ಡಿಸೆಂಬರ್ 22 ರಂದು ಶಕ್ತಿಹಿಲ್ ರೆಸಾರ್ಟ್ ಬಳಿ ಪೊಲೀಸರು ವಾಹನ ತಪಾಸಣಾ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಬಜಾಜ್ ಪಲ್ಸರ್ ಬೈಕ್‍ನಲ್ಲಿ ಬಂದ ಶ್ರೀನಿವಾಸ ಎಂಬಾತನನ್ನು ತಡೆದು ಪರಿಶೀಲಿಸಿದ್ದಾರೆ. ಆ ಸಂದರ್ಭದಲ್ಲಿ ಆತನ ಬಳಿ ಇದ್ದ 53 ಗ್ರಾಂ ತೂಕದ ಎರಡು ಚಿನ್ನದ ಬಳೆಗಳ ಬಗ್ಗೆ ಸಮಂಜಸವಾದ ಉತ್ತರ ನೀಡದಿದ್ದರಿಂದ ಠಾಣೆಗೆ ಕರೆದೊಯ್ದಿದ್ದಾರೆ.

ಇನ್ಸ್‍ಪೆಕ್ಟರ್ ನವೀನ್ ಸೂಪೇಕರ್ ಮತ್ತು ಸಿಬ್ಬಂದಿ ತೀವ್ರ ವಿಚಾರಣೆಗೊಳಪಡಿಸಿ ಆಭರಣಗಳನ್ನು ಕಳವು ಮಾಡಿ ತಮಿಳುನಾಡಿನ ಹೊಸೂರಿನಲ್ಲಿ ವಿಲೇವಾರಿ ಮಾಡಿದ್ದ 52.7 ಗ್ರಾಂ ತೂಕದ ಚಿನ್ನದ ಒಡವೆಗಳೂ ಸೇರಿ 5.30 ಲಕ್ಷ ರೂ. ಮೌಲ್ಯದ 105.7 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Facebook Comments