ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಇಂದು ಸಂಜೆ ದಿನಾಂಕ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.1-ಜಾರ್ಖಂಡ್ ವಿಧಾನಸಭೆಯ 81 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಇಂದು ಸಂಜೆ ಚುನಾವಣಾ ದಿನಾಂಕ ಪ್ರಕಟಿಸಲಿದೆ.  ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಸುನೀಲ್ ಅರೋರಾ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದ್ದಾರೆ. ಕಳೆದ ವಿಧಾನಸಭಾ ಅವಧಿ ಜನವರಿಯಲ್ಲಿ ಪೂರ್ಣಗೊಳ್ಳಲಿದೆ.

ಜಾರ್ಖಂಡ್‍ನೊಂದಿಗೆ ಕೇಂದ್ರಾಡಳಿತ ಪ್ರದೇಶ ದೆಹಲಿಗೂ ಚುನಾವಣಾ ದಿನಾಂಕ ಇಂದು ಪ್ರಕಟವಾಗಲಿದೆಯೆಂದು ಹೇಳಲಾಗಿತ್ತಾದರೂ ಕೇಂದ್ರ ಚುನಾವಣಾ ಆಯೋಗ ಜಾರ್ಖಂಡ್ ವಿಧಾನಸಭೆಯನ್ನು ಮಾತ್ರ ಪ್ರಸ್ತಾಪಿಸಿದೆ.

Facebook Comments