ಜಿಂದಾಲ್‍ಗೆ ಭೂಮಿ ಪರಭಾರೆ : ಎಂ.ಬಿ. ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.26- ಜಿಂದಾಲ್ ಕಂಪೆನಿಗೆ 3363 ಎಕರೆ ಭೂಮಿ ಪರಭಾರೆ ಸಂಬಂಧಪಟ್ಟಂತೆ ಎದ್ದಿರುವ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ.

ಮಾಜಿ ಸಚಿವ ಎಚ್.ಕೆ.ಪಾಟೀಲ್, ಶಾಸಕ ಆನಂದ್‍ಸಿಂಗ್ , ಬಿಜೆಪಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ನಾಯಕರು ಜಿಂದಾಲ್‍ಗೆ ಭೂಮಿ ಮಾರಾಟ ಮಾಡುವುದನ್ನು ವಿರೋಧಿಸಿತ್ತು. ಹಲವಾರು ಪ್ರತಿಭಟನೆಗಳು ಕೂಡ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಉಪ ಸಮಿತಿ ರಚಿಸುವ ಕುರಿತಂತೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು.

ಇಂದು ಹೊರಡಿಸಿರುವ ಆದೇಶದಲ್ಲಿ ಗೃಹ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸದಸ್ಯರುಗಳಾಗಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ಇರುತ್ತಾರೆ.

Facebook Comments

Sri Raghav

Admin