ಸಹಜ ಸ್ಥಿತಿಯತ್ತ ಕಾಶ್ಮೀರ, ಸ್ಥಿರ ದೂರವಾಣಿ ಸೇವೆ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಆ.25- ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಭಾರತೀಯ ಸಂವಿಧಾನದ 370ನೆ ವಿಧಿ ರದ್ಧತಿ ನಂತರ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದ ಕಣಿವೆ ಪ್ರಾಂತ್ಯ ಸಹಜ ಸ್ಥಿತಿಗೆ ಮರಳುತ್ತಿದೆ.

ಈ ಮಧ್ಯೆ ಸ್ಥಿರ ದೂರವಾಣಿ ಸೇವೆಗಳನ್ನು ಬಹುತೇಕ ಪ್ರದೇಶಗಳಲ್ಲಿ ಪುನರಾರಂಭಿಸಲಾಗಿದೆ. ಕಣಿವೆ ಪ್ರಾಂತ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಕಳೆದ ಕೆಲವು ದಿನಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.

ಹೀಗಾಗಿ ರಾಜಧಾನಿ ಶ್ರೀನಗರ ಸೇರಿದಂತೆ ವಿವಿಧ ನಗರಗಳಿಗೆ ಸ್ಥಿರ ದೂರವಾಣಿ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ಉನ್ನತಾಧಿಕಾರಿಗಳು ತಿಳಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಿದ್ದ ಭಾರತ ಸಂವಿಧಾನದ 370ನೆ ವಿಧಿಯನ್ನು ಕೇಂದ್ರ ಸರ್ಕಾರ ಆಗಸ್ಟ್ 5ರಂದು ರದ್ದುಗೊಳಿಸಿತ್ತು.

ಇದಾದ ನಂತರ ಕಣಿವೆ ಪ್ರಾಂತ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ವಿವಿಧ ಪಕ್ಷಗಳ ಮುಖಂಡರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಲಾಗಿತ್ತು. ಇಂಟರ್‍ನೆಟ್ ಮತ್ತು ದೂರವಾಣಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

20 ದಿನಗಳ ನಂತರ ಕಾಶ್ಮೀರದಲ್ಲಿ ಪರಿಸ್ಥಿತಿ ಸಂಪೂರ್ಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ದೂರವಾಣಿ ಸೇವೆಗಳು ಆರಂಭವಾಗಿದ್ದು, ಶಾಲಾ-ಕಾಲೇಜುಗಳು ಈಗಾಗಲೇ ಎಂದಿನಂತೆ ನಡೆಯುತ್ತಿವೆ. ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್ ಮುಂದುವರಿಸಲಾಗಿದೆ.

Facebook Comments