ಕಾಶ್ಮೀರ : ಬಂಧಿತ ನಾಯಕರ ಬಿಡುಗಡೆಗೆ ಕೇಂದ್ರ ಮಧ್ಯ ಪ್ರವೇಶಿಸಲ್ಲ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಡಿ.10- ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿ ಸಂದರ್ಭದಲ್ಲಿ ಬಂಧಿತರಾದ ಮೂವರು ಮಾಜಿ ಮುಖ್ಯಮಂತ್ರಿಗಳು ಮತ್ತು ರಾಜಕೀಯ ನಾಯಕರ ಬಿಡುಗಡೆ ಕುರಿತು ರಾಜ್ಯಾಡಳಿತ ನಿರ್ಧಾರ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಲೋಕಸಭೆಯಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಶ್ಮೀರದಲ್ಲಿ 370ನೆ ವಿಧಿ ರದ್ಧತಿ ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಸೇರಿದಂತೆ ರಾಜಕೀಯ ನಾಯಕರನ್ನು ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌದರಿ ಸರ್ಕಾರವನ್ನು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಗೃಹ ಸಚಿವರು ಅಗತ್ಯಕ್ಕಿಂತ ಒಂದು ದಿನ ಕೂಡ ಯಾರನ್ನೂ ಬಂಧನದಲ್ಲಿ ಇರಿಸಲು ಕೇಂದ್ರ ಸರ್ಕಾರ ಇಚ್ಛಿಸುವುದಿಲ್ಲ. ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಆಡಳಿತ ನಿರ್ಧಾರ ಕೈಗೊಳ್ಳುತ್ತದೆ. ಈ ವಿಷಯದಲ್ಲಿ ಕೇಂದ್ರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

Facebook Comments