ಜಾಗತಿಕ ಮಟ್ಟದಲ್ಲಿ ಭಾರತದ ಪಾತ್ರ ಮಹತ್ವದ್ದು: ಅಮೆರಿಕಾ

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್,ಏ.7- ಜಾಗತಿಕ ಮಟ್ಟದಲ್ಲಿ ಭಾರತ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಅಮೆರಿಕಾದ ಹವಾಮಾನ ವಿಶೇಷ ಕಾರ್ಯದರ್ಶಿ ಜಾನ್ ಕೆರ್ರಿ ಅಭಿಪ್ರಾಯಪಟ್ಟಿದ್ದಾರೆ. ಕ್ಲಿಷ್ಟ ಸನ್ನಿವೇಶದಲ್ಲಿ ಆರ್ಥಿಕ ಬೆಳವಣಿಗೆ ಕಾಪಾಡಿಕೊಳ್ಳುವುದರ ಜೊತೆಗೆ ಹವಾಮಾನ ಸಮಸ್ಯೆ ನಿವಾರಣಗೆ ಭಾರತ ಕೈಗೊಂಡಿರುವ ಕಾರ್ಯ ಶ್ಲಾಘನೀಯ.

ಇದಲ್ಲದೆ, ಲಿಂಗ ತಾರತಮ್ಯ ಹೋಗಲಾಡಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಭಾರತ ಕೈಗೊಂಡಿರುವ ತೀರ್ಮಾನಗಳನ್ನು ಗಮನಿಸಿದರೆ ಜಾಗತಿಕ ಮಟ್ಟದಲ್ಲಿ ಆ ರಾಷ್ಟ್ರದ ಮಹತ್ವ ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ. ಹವಾಮಾನ ಬದಲಾವಣೆ, ಮಹಿಳಾ ಸಬಲೀಕರಣ ಸೇರಿದಂತೆ ಅಮೆರಿಕಾ ಕೈಗೊಂಡಿರುವ ಹಲವಾರು ಯೋಜನೆಗಳಿಗೆ ಭಾರತ ಸಹಕಾರ ನೀಡಿದೆ ಎಂದು ಅವರು ಗುಣಗಾನ ಮಾಡಿದ್ದಾರೆ.

Facebook Comments