ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 23-11-2019ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 28-11-2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಹತೆ: ಭಾರತೀಯ ನೌಕಾಪಡೆಯಲ್ಲಿ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ / ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಮೆಟ್ರಿಕ್ಯುಲೇಷನ್/10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದುಕೊಂಡಿರಬೇಕು.

ವಯೋಮಿತಿ: ಅಭ್ಯರ್ಥಿಗಳು 01 ಅಕ್ಟೋಬರ್ 2000 ರಿಂದ 30 ಸೆಪ್ಟೆಂಬರ್ 2003 ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಅರ್ಜಿದಾರರಿಗೆ ಸಾಮಾನ್ಯ ಅಭ್ಯರ್ಥಿಗಳು 215 ರೂ.  ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ), ದೈಹಿಕ ಸಾಮರ್ಥ್ಯ ಪರೀಕ್ಷೆ (ಪಿಇಟಿ), ವೈದ್ಯಕೀಯ ಪರೀಕ್ಷೆಯಲ್ಲಿ ಫಿಟ್‌ನೆಸ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯನ್ನು ಗಮನಿಸಿ:

Facebook Comments