ಪಿಯುಸಿ ಮುಗಿಸಿದವರಿಗೆ ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.06: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 04/11/ 2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 18-11-2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಹತೆ: ಭಾರತೀಯ ನೌಕಾಪಡೆಯಲ್ಲಿ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ / ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10+2/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಪಡೆದುಕೊಂಡಿರಬೇಕು.

ವಯೋಮಿತಿ: ಆಗಸ್ಟ್ 1,2000 ರಿಂದ ಜುಲೈ 31,2003ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಅರ್ಜಿದಾರರಿಗೆ ಸಾಮಾನ್ಯ ಅಭ್ಯರ್ಥಿಗಳು 215 ರೂ.  ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ), ದೈಹಿಕ ಸಾಮರ್ಥ್ಯ ಪರೀಕ್ಷೆ (ಪಿಇಟಿ), ವೈದ್ಯಕೀಯ ಪರೀಕ್ಷೆಯಲ್ಲಿ ಫಿಟ್‌ನೆಸ್ ಆಧಾರದ ಮೇಲೆ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಈ ಅಧಿಸೂಚನೆಯನ್ನು ಗಮನಿಸಿ:

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ