ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದ ಪತ್ರಕರ್ತನಿಗೆ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ.13-ಅತ್ಯಾಚಾರದ ಆರೋಪಕ್ಕೆ ಗುರಿಯಾಗಿದ್ದ ಮುಂಬೈ ಮೂಲದ ಟಿವಿ ಪತ್ರಕರ್ತನಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪತ್ರಕರ್ತ ವರುಣ್ ಹಿರೆಮಠ್ ವಿರುದ್ಧ 22 ವರ್ಷದ ಯುವತಿ ಅತ್ಯಾಚಾರದ ಆರೋಪ ಮಾಡಿದ್ದರು.ಕಳೆದ ಫೆ.20 ರಂದು ವರುಣ್ ಚಾಣಕ್ಯಪುರಿಯಲ್ಲಿರುವ ಫೈವ್ ಸ್ಟಾರ್ ಹೋಟೆಲ್‍ನಲ್ಲಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದ ಎಂದು ಯುವತಿ ದೂರು ನೀಡಿದ್ದರು.

ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದ ವರುಣ್‍ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿತ್ತು. ಹೀಗಾಗಿ ವರುಣ್ ಹೈಕೋರ್ಟ್ ಮೆಟ್ಟಿಲೇರಿದ್ದು, ಅತನಿಗೆ ನ್ಯಾಯಮೂರ್ತಿ ಮುಕ್ತಾ ಗುಪ್ತಾ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

Facebook Comments

Sri Raghav

Admin