ಗುಂಡೇಟಿನಿಂದ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಗಾಜಿಯಾಬಾದ್,ಜು.22- ಸೋಮವಾರ ಗಾಜಿಯಾಬಾದ್ ನ ವಿಜಯ್ ನಗರ ಪ್ರದೇಶದಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಪತ್ರಕರ್ತ ವಿಕ್ರಮ್ ಜೋಶಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇವರು ಸೋಮವಾರ ರಾತ್ರಿ ಘಜಿಯಾಬಾದ್ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್ನಲ್ಲಿ ತೆರಳುತ್ತಿದ್ದರು. ಐವರ ಗುಂಪು ಪತ್ರಕರ್ತನ ಮೇಲೆ ಹಲ್ಲೆ ನಡೆಸಿತ್ತು.

ವಿಕ್ರಂ ಜೋಶಿಯನ್ನು ಕಾರಿನತ್ತ ಎಳೆದುಕೊಂಡು ಹೋದ ದುಷ್ಕರ್ಮಿಗಳು ಆತನ ಮಕ್ಕಳೆದುರೇ ಗುಂಡು ಹಾರಿಸಿದ್ದರು. ಆತನ ಹೆಣ್ಣುಮಕ್ಕಳಿಬ್ಬರೂ ಸಹಾಯಕ್ಕಾಗಿ ಕಿರುಚಾಡಿದ್ದರು.

ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ಅಡ್ಡಹಾಕಿ, ತಮ್ಮ ಅಪ್ಪನನ್ನು ಕಾಪಾಡುವಂತೆ ಅವರು ಗೋಗರೆಯುತ್ತಿದ್ದ ದೃಶ್ಯ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆಗ ಅಪರಿಚಿತರೊಬ್ಬರು ವಿಕ್ರಂ ಜೋಶಿಯನ್ನು ಆಸ್ಪತ್ರೆಗೆ ಸೇರಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಮೃತಪಟ್ಟಿದ್ದಾರೆ.

ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆ ಐವರು ಕೂಡ ಪತ್ರಕರ್ತ ವಿಕ್ರಂ ಜೋಶಿ ಕುಟುಂಬಕ್ಕೆ ಪರಿಚಯವಿದ್ದವರೇ ಆಗಿದ್ದಾರೆ ಎನ್ನಲಾಗಿದೆ. ಇನ್ನು, ಕೊಲೆಗೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನಪೊಲೀಸರು ಬಂಧಿಸಿದ್ದಾರೆ. ರವಿ ಎಂಬುವ ಈ ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಕೆಲವು ಪುಡಾರಿಗಳು ತಮ್ಮ ಸೊಸೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಜೋಶಿ ಪೊಲೀಸರಿಗೆ ದೂರು ನೀಡಿದ್ದರು.ಇದಾದ ಕೆಲ ದಿನಗಳ ನಂತರ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.

Facebook Comments

Sri Raghav

Admin