ಡಿಸೆಂಬರ್‌ನಲ್ಲಿ ಕರ್ನಾಟಕಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.22- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಡಿಸೆಂಬರ್ ತಿಂಗಳ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಆ ಸಂದರ್ಭದಲ್ಲಿ ಉತ್ತರ ಕರ್ನಾಟಕ ಜಿಲ್ಲಾಗಳಿಗೂ ಭೇಟಿ ನೀಡಲಿದ್ದಾರೆ.  ವಿವಿಧ ಜಿಲ್ಲಾಗಳ ಬಿಜೆಪಿ ನಾಯಕರೊಂದಿಗೆ ನಡ್ಡಾ ಅವರು ಮಾತುಕತೆ ನಡೆಸಲಿದ್ದಾರೆ. ಅಲ್ಲದೆ, ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಪಾಲ್ಗೊಂಡು, ಪದಾಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ಪಕ್ಷದ ನೆಲೆಯನ್ನು ಮತ್ತಷ್ಟು ಬಲಪಡಿಸುವತ್ತ ನಡ್ಡಾ ಅವರು ಗಮನ ಹರಿಸಿದ್ದು, ಇದಕ್ಕಾಗಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.  ಭೇಟಿ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಹಾಗೂ ಸಚಿವರೊಂದಿಗೆ ಸಭೆ ನಡೆಸಲಿದ್ದು, ರಾಜ್ಯ ಆಡಳಿತದದ್ದಾಗುತ್ತಿರುವ ಆಗುಹೋಗುಗಳ ಬಗ್ಗೆಯೂ ಗಮನ ಹರಿಸಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಕೆಲ ಬಿಜೆಪಿ ಮುಖಂಡರಿಗೂ ಎಚ್ಚರಿಕೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರವು ವಿವಿಧ ಚುನಾವಣೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯ ತಂತ್ರಗಳ ಬಗ್ಗೆಯೂ ನಡ್ಡಾ ಅವರು ಚರ್ಚಿಸಲಿದ್ದಾರೆ.

Facebook Comments