ಜೆ.ಪಿ.ನಡ್ಡಾ ಗೋವಾ ಪ್ರವಾಸ, ಇಂದು ಮಹಾಲಕ್ಷ್ಮಿ ದೇಗುಲಕ್ಕೆ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಪಣಜಿ,ನ.25- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಇಂದು ಪಣಜಿಯ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ನಡ್ಡಾ ಅವರು ನಿನ್ನೆಯಿಂದ ಎರಡು ದಿನಗಳ ಕಾಲ ಗೋವಾ ಪ್ರವಾಸದಲ್ಲಿದ್ದಾರೆ.

ಬಳಿಕ ವಲ್ಪೋ ಮತ್ತು ಬಿಚಿಲಿಂಗೆ ತೆರಳಿದ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಎರಡು ಸಭೆಗಳನ್ನು ನಡೆಸಿದ್ದು ಸಂಘಟನೆ ಕುರಿತು ಚರ್ಚೆ ನಡೆಸಿದ್ದಾರೆ.

2022ರಲ್ಲಿ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ಹಾಗೂ ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಮತ್ತು ಶಾಸಕ ದರ್ರ್ಶನ ಜೋರ್ಡಾನ್ ಅವರುಗಳನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿದೆ.

Facebook Comments