ಕರ್ನಾಟಕದ 224 ಕ್ಷೇತ್ರಗಳಲ್ಲೂ ಕಮಲ ಅರಳಿಸಲು ತಯಾರಿ ನಡೆಸುವಂತೆ ನಡ್ಡಾ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.14-ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಕಮಲ ಅರಳಿಸಲು ಕಾರ್ಯಕರ್ತರು ಇಂದಿನಿಂದಲೇ ಕಾರ್ಯೋನ್ಮುಖರಾಗಿ ಕೆಲಸ ಮಾಡಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕರೆ ನೀಡಿದ್ದಾರೆ.

ವಚ್ರ್ಯುವಲ್ ಮೂಲಕ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ನಿರ್ಮಾಣ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಕಮಲ ಅರಳಬೇಕಾದರೆ ಕಾರ್ಯಕರ್ತರು ಈಗಿನಿಂದಲೇ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಗ್ರಾಮಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ನಗರಸಭೆ, ಪಾಲಿಕೆಗಳು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲೂ ಬಿಜೆಪಿ ಅಕಾರ ಹಿಡಿಯಬೇಕು. ಪಕ್ಷ ಅಕಾರಕ್ಕೆ ಬರಬೇಕೆಂದರೆ ಕಾರ್ಯಕರ್ತರ ಪರಿಶ್ರಮ ಅತ್ಯಗತ್ಯ. ಯಾವ ಯಾವ ಕ್ಷೇತ್ರಗಳಲ್ಲಿ ಪಕ್ಷ ಹಿನ್ನಡೆ ಕಂಡಿದೆಯೋ ಅಂತಹ ಕಡೆ ಸಂಘಟನೆಯನ್ನು ಚುರುಕುಗೊಳಿಸಬೇಕೆಂದು ಹೇಳಿದರು.

ಬಿಜೆಪಿ ಅಕಾರ ಹಿಡಿಯಲು ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದ ಕಡೆಯೂ ಇಂದು ನಾವು ಗೆಲುವು ಸಾಸಿ ಅಕಾರವನ್ನು ಹಿಡಿದಿದ್ದೇವೆ. ರಾಜ್ಯದಲ್ಲಿ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಕೆಲವು ಜಿಲ್ಲೆಗಳ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ತಿಳಿಸಿದರು.

# ಸರ್ಕಾರಕ್ಕೆ ಶಹಭಾಷ್ ಗಿರಿ:
ಜೆ.ಪಿ.ನಡ್ಡಾ ಅವರು ತಮ್ಮ ಭಾಷಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಪುಟದ ಸಹೋದ್ಯೋಗಿಗಳು, ಶಾಸಕರು, ಪಕ್ಷದ ಪದಾಕಾರಿಗಳು ಹಾಗೂ ಕಾರ್ಯಕರ್ತರು ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ತೋರಿದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಕ್‍ಡೌನ್ ಸಂದರ್ಭದಲ್ಲಿ ದೇಶಕ್ಕೆ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಎಲ್ಲಾ ಚುಟವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡು ದೈನಂದಿನ ನಿರ್ವಹಣೆಯೇ ದುಸ್ತರವಾಗಿತ್ತು. ಇಂತಹ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಸ್ವಲ್ಪವೂ ದೃತಿಗೆಡದೆ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ ಎಂದು ಪ್ರಶಂಸಿಸಿದರು.

ನೇಕಾರರು, ಮೀನುಗಾರರು, ಸವಿತಾ ಸಮಾಜ, ರೈತರು, ಆಶಾ ಕಾರ್ಯಕರ್ತರು, ಚಮ್ಮಾರರು, ಬಡಗಿಗಳು, ಹೂ ಮಾರಾಟಗಾರರು ಸೇರಿದಂತೆ ಶ್ರಮಿಕ ವರ್ಗಕ್ಕೆ 5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ದೇಶಕ್ಕೆ ಕರ್ನಾಟಕ ಮಾದರಿಯಾಗಿದೆ ಎಂದು ಹೇಳಿದರು.

ಕೇಂದ್ರದಿಂದ ಆರ್ಥಿಕ ನೆರವನ್ನು ನಿರೀಕ್ಷಿಸದೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸರ್ಕಾರದ ಬೊಕ್ಕಸದಿಂದಲೇ 5 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಎಲ್ಲ ವರ್ಗದವರಿಗೂ ಆರ್ಥಿಕ ನೆರವು ನೀಡಿದರು. ಅದರಲ್ಲೂ ಕೋವಿಡ್ ವಾರಿಯರ್ಸ್‍ಗಳಾದ ಆಶಾಕಾರ್ಯಕರ್ತೆಯರು ಹಾಗೂ ವೈದ್ಯರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದ್ದಾರೆ ಎಂದು ತಿಳಿಸಿದರು.

ಕೋವಿಡ್ ಬಿಕ್ಕಟ್ಟಿನ ನಿರ್ವಹಣೆಯನ್ನು ಮುಖ್ಯಮಂತ್ರಿ ಸೇರಿದಂತೆ ಪ್ರತಿಯೊಬ್ಬರು ಅತ್ಯುತ್ತಮವಾಗಿ ನಿಭಾಯಿಸಿದ್ದಾರೆ. ಎಲ್ಲಾ ಕಡೆ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಸಾರ್ವಜನಿಕರಿಗೆ ಆಹಾರದ ಕಿಟ್, ಔಷ, ದಿನಸಿ ಸೇರಿದಂತೆ ಗೃಹಪಯೋಗಿ ವಸ್ತುಗಳನ್ನು ವಿತರಣೆ ಮಾಡಿದ್ದಾರೆ. ಇದಕ್ಕಾಗಿ ಪಕ್ಷದ ವತಿಯಿಂದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಆರ್ಥಿಕ ಸಂಕಷ್ಟದ ನಡುವೆಯೂ ಪ್ರಧಾನಿ ನರೇಂದ್ರಮೋದಿ ಅವರು ಆತ್ಮನಿರ್ಭರ್ ಯೋಜನೆಯಡಿ ದೇಶಕ್ಕೆ 20 ಲಕ್ಷ ಕೋಟಿ ಪ್ಯಾಕೇಜ್ ಮಾಡಿದ್ದಾರೆ. ಕರ್ನಾಟಕಕ್ಕೆ ಮುಂದಿನ ದಿನಗಳಲ್ಲಿ ಇದರಿಂದ ದೊಡ್ಡ ಲಾಭ ಸಿಗಲಿದೆ ಎಂದು ಹೇಳಿದರು.
ವಿಶೇಷವಾಗಿ ಕೃಷಿ ವಲಯಕ್ಕೆ ಭಾರೀ ಲಾಭವಾಗಲಿದೆ. ಕರ್ನಾಟಕ ಇದರ ಲಾಭವನ್ನು ಸದುಪಯೋಗಪಡಿಸಿಕೊಳ್ಳಬೇಕು.

ರಾಜ್ಯಕ್ಕೆ ಸಿಗಬಹುದಾದ ಯೋಜನೆಗಳ ಪಟ್ಟಿಯನ್ನು ಸಿದ್ದಪಡಿಸಿ ಸಂಬಂಧಪಟ್ಟ ಇಲಾಖೆಗೆ ನೀಡುವಂತೆ ಸೂಚಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮುಂದಿನ ಎರಡು ಮೂರು ವರ್ಷಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸುವ ಯೋಜನೆ ಹಾಕಿಕೊಂಡಿದ್ದೇವೆ. ಇದಕ್ಕಾಗಿ ಭೂಮಿ ಖರೀದಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದರು.

ಈಗ ಬೀದರ್, ವಿಜಯಪುರ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೋಲಾರ, ಚಾಮರಾಜನಗರ ಮತ್ತು ತಿಪಟೂರಿನಲ್ಲಿ ಮಂಡಲ ಕಾರ್ಯಾಲಯ ಪ್ರಾರಂಭವಾಗುತ್ತಿವೆ. ಮುಂದಿನ ದಿನಗಳಲ್ಲಿ ಹಾವೇರಿ,ರಾಮನಗರ, ಉತ್ತರಕನ್ನಡ ಸೇರಿದಂತೆ ಒಟ್ಟು 11 ಕಡೆ ಕಾರ್ಯಾಲಯಗಳು ಪ್ರಾರಂಭವಾಗಲಿವೆ.

ಈ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಇರುವ ಕಾರಣ ಭೂಮಿ ಖರೀದಿ ವಿಳಂಬವಾಗಿದೆ. ಒಂದೆರಡು ತಿಂಗಳಲ್ಲಿ ಇದು ಕೂಡ ಪೂರ್ಣಗೊಳ್ಳಲಿದ್ದು, ಎರಡುಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಕಾರ್ಯಾಲಯಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಇನ್ನು ಮುಂದೆ ನಾನು ಕೂಡ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದೇನೆ. ಯಾವ ಯಾವ ಕಡೆ ಪಕ್ಷ ದುರ್ಬಲವಾಗಿದೆಯೋ ಅಂತಹ ಕಡೆ ವಿಶೇಷ ಒತ್ತು ಕೊಟ್ಟು ಸಂಘಟನೆ ಮಾಡುವುದಾಗಿ ಹೇಳಿದರು.

ವಚ್ರ್ಯುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮರುಳೀಧರ್ ರಾವ್, ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಪಕ್ಷದ ಮುಖಂಡರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Facebook Comments

Sri Raghav

Admin