ಬ್ರೇಕಿಂಗ್ : ಸಂಜನಾಗೆ 2 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ‘ಮಾದಕ’ ನಟಿ ಶಿಫ್ಟ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು.ಸೆ.16 : ಡ್ರಗ್ಸ್ ದಂಧೆಯಲ್ಲಿ ಸಿಲುಕಿಕೊಂಡಿರುವ ಸ್ಯಾಂಡಲ್ ವುಡ್ ಬೆಡಗಿ ಸಂಜನಾಗೆ ಜೈಲು ಸೇರಿದ್ದಾರೆ. ಸಿಸಿಬಿ ಕಸ್ಟಡಿಯಲ್ಲಿದ್ದ ಸಂಜನಾ ಅವರನ್ನು ಇಂದು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು. ತೀವ್ರ ವಿಚಾರಣೆಯ ನಂತರ ಅವರನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಈಗಾಗಲೇ ಪರಪ್ಪನ ಅಗ್ರಹಾರದ ವಿಶೇಷ ಸೆಲ್ ನಲ್ಲಿರುವ ಮತ್ತೊಬ್ಬ ನಟಿ ರಾಗಿಣಿ ಅವರ ಜೊತೆ ಈಗ ಸಂಜನಾ ಸೇರಿಕೊಳ್ಳಲಿದ್ದಾರೆ. ಸಂಜನಾ ಅವರ ಪೊಲೀಸ್ ಕಸ್ಟಡಿ ಇಂದು ಮುಗಿಯುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಸಿಸಿಬಿ ಪೊಲೀಸರು ಸಂಜನಾ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

ಇದಕ್ಕೂ ಮೊದಲು ರಾಗಿಣಿ ದ್ವಿವೇದಿ ಅವರನ್ನು ಸೆಪ್ಟೆಂಬರ್ 14 ರಂದು 14 ದಿನಗಳ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿತ್ತು. ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಆದರೆ ವಿಚಾರಣೆಯನ್ನು ಸೆಪ್ಟೆಂಬರ್ 19 ಕ್ಕೆ ಮುಂದೂಡಲಾಗಿದೆ.

ಈಗಾಗಲೇ ನಟಿ ರಾಗಿಣಿ ಸೇರಿ 5 ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈಗ ಸಂಜನಾ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಲಿದ್ದಾರೆ.

Facebook Comments

Sri Raghav

Admin