ಬೆಂಗಳೂರಿನ ಜುಮ್ಮಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.8- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಆತಂಕದಿಂದ ಜುಮ್ಮಾ ಮಜೀದ್ ಟ್ರಸ್ಟ್ ತನ್ನ ಅಧೀನದಲ್ಲಿ ಬರುವ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ರದ್ದುಗೊಳಿಸಿದ್ದು, ಇಂದಿನಿಂದ ಮಸೀದಿಗಳನ್ನು ಮುಚ್ಚುವುದಾಗಿ ಪ್ರಕಟಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜುಮ್ಮಾ ಮಜೀದ್ ಟ್ರಸ್ಟ್ ಮಂಡಳಿಯ ಕಾರ್ಯದರ್ಶಿ ಎಸ್.ಎಸ್.ಅಶ್ರಫ್‍ಖಾದ್ರಿ ಅವರು, ಜುಲೈ 9ರಿಂದ ಮುಂದಿನ ಆದೇಶದವರೆಗೆ ಟ್ರಸ್ಟ್‍ನ ವ್ಯಾಪ್ತಿಗೊಳಪಡುವ ಎಲ್ಲಾ ಮಸೀದಿಗಳನ್ನು ಮುಚ್ಚುವುದಾಗಿ ಸ್ಪಷ್ಟ ಪಡಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ಟ್ರಸ್ಟ್ ನಿರ್ಧಾರ ತೆಗೆದುಕೊಂಡಿದ್ದು, ಮುಸ್ಲಿಂರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮಸೀದಿಗಳಲ್ಲಿ ಪ್ರಾರ್ಥನೆಯನ್ನು ನಿಷೇಧಿಸಲಾಗಿದೆ ಎಂದಿದ್ದಾರೆ. ಮುಸ್ಲಿಂ ಭಾಂದವರು ತಮ್ಮ ಮನೆಯಲ್ಲೇ ಪ್ರಾರ್ಥನೆ ಮಾಡಬೇಕು. ಸ್ವಚ್ಚತೆ ಕಾಪಾಡಿಕೊಂಡು ಸುರಕ್ಷಿತವಾಗಿರಬೇಕು ಎಂದು ಅವರು ಮನವಿ ಮಾಡಿದ್ದಾರೆ.

Facebook Comments