ಎನ್ಜಿಟಿ ಅಧ್ಯಕ್ಷರಾಗಿ ಆದರ್ಶ್ ಕುಮಾರ್ ಗೋಯೆಲ್ ನೇಮಕ
ನವದೆಹಲಿ,ಜು.7- ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ನ ನೂತನ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ನ ನಿವೃತ್ತಿ ನ್ಯಾಯಾಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಸ್ವತಂತರ್ ಕುಮಾರ್ 2017 ಡಿಸೆಂಬರ್ 20 ರಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ನ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಹೊಂದಿದ್ದರು. ಖಾಲಿಯಿದ್ದ ಅಧ್ಯಕ್ಷ ಸ್ಥಾನಕ್ಕೆ ಈಗ ಆದರ್ಶ್ ಕುಮಾರ್ ಗೋಯೆಲ್ ನೇಮಕಗೊಂಡಿದ್ದಾರೆ. ನ್ಯಾಯಮೂರ್ತಿ ಗೋಯೆಲ್ 2014 ರಲ್ಲಿ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
Facebook Comments