ಶೀಘ್ರದಲ್ಲೇ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಎಂಆರ್‍ಐ ಸೌಲಭ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.28- ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ಮತ್ತು ಎಂಆರ್‍ಐ ಸ್ಕ್ಯಾನಿಂಗ್ ಸೌಲಭ್ಯ ಕಲ್ಪಿಸಲು ಸರ್ಕಾರ ಸಮ್ಮತಿಸಿದೆ ಎಂದು ಆಸ್ಪತ್ರೆಯ ಅಧೀಕ್ಷಕ ಡಾ. ಬಿ.ಆರ್. ವೆಂಕಟೇಶಯ್ಯ ತಿಳಿಸಿದರು.

ನಗರದ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಆವರಣದಲ್ಲಿ 71 ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಆಸ್ಪತ್ರೆಯ ಆವರಣದಲ್ಲಿ ಗಿಡ ನೆಟ್ಟು ಮಾತನಾಡಿದ ಅವರು, ಸುಮಾರು 80 ವರ್ಷದ ಹಿಂದೆ ಮೈಸೂರು ಮಹಾರಾಜರ ಕಾಲದಲ್ಲಿ ಪ್ರಾರಂಭವಾದ ಈ ಆಸ್ಪತ್ರೆ ಈಗ ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ.

ಇದರಿಂದ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು. ಪ್ರಸ್ತುತ ಸಿಟಿ ಸ್ಕ್ಯಾನ್‍ಗೆ 2500 ರೂ. ಎಂಆರ್‍ಐ ಸ್ಕ್ಯಾನ್‍ಗೆ 6 ಸಾವಿರ ರೂ ವರೆಗೂ ಶುಲ್ಕ ಪಾವತಿಸಬೇಕಾಗುತ್ತದೆ. ಬಡ ಜನರಿಗೆ ಈ ಮೊತ್ತ ದುಬಾರಿಯೆನಿಸುತ್ತಿತ್ತು. ಈಗ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯ ಲಭಿಸುವುದರಿಂದ ಖಾಸಗಿ ಕೇಂದ್ರಗಳನ್ನು ಹುಡುಕಿಕೊಂಡು ಹೋಗುವ ತಾಪತ್ರಯ ಇಲ್ಲವಾಗುತ್ತಿದೆ ಎಂದರು.

ಅಪಘಾತ ಪ್ರಕರಣ, ತುರ್ತು ಚಿಕಿತ್ಸಾ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಅನುಕೂಲಕ್ಕಾಗಿ ಶೀಘ್ರದಲ್ಲೇ ಎಂ.ಆರ್.ಐ ಸ್ಕ್ಯಾನಿಂಗ್ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಸುಮಾರು 80 ವರ್ಷದ ಹಿಂದೆ ಮೈಸೂರು ಮಹಾರಾಜರ ಕಾಲದಲ್ಲಿ ಪ್ರಾರಂಭವಾದ ಆಸ್ಪತ್ರೆ ಈಗ ಅತ್ಯಾಧುನಿಕ ತಂತ್ರಜ್ಞಾನದ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ ಇದರಿಂದ ಲಕ್ಷಾಂತರ ಬಡ ರೋಗಿಗಳಿಗೆ ಚಿಕಿತ್ಸೆ ದೊರೆತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವೆ ಎಂದು ಡಾ. ಬಿ.ಆರï ವೆಂಕಟೇಶಯ್ಯ ತಿಳಿಸಿದರು.

ಈ ವೇಳೆ ಡಾ. ಮೋಹನ್, ಡಾ. ಶಶಿಕಲಾ, ಡಾ. ರಾಜಣ್ಣ, ಡಾ. ಸುರೇಶ್, ಡಾ. ಪ್ರಕಾಶ್, ಡಾ. ಶೀಲಾ ಮನೆ, ಡಾ. ನಾಗಮ್ಮ, ಬೆಂಗಳೂರು ನಗರ ಜಿಲ್ಲಾ ಕಸಾಪ ಮಹಿಳಾ ಸಂಚಾಲಕಿ ನಾಗಮಣಿ, ಗೋವಿಂದರಾಜನಗರ ವಿಧಾನಸಭಾ ಕಸಾಪ ಅಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಸ್ವಸ್ತಿಕ್, ಯತೀಶ್ ಮತ್ತಿತರರು ಭಾಗವಹಿಸಿದ್ದರು.

Facebook Comments

Sri Raghav

Admin