ಸುಪ್ರೀಂ ತೀರ್ಪಿನ ಬಗ್ಗೆ ಮಾಜಿ ಸ್ಪೀಕರ್ ಬೋಪಯ್ಯನವರ ಅಭಿಪ್ರಾಯವೇನು..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.17-ಶಾಸಕರ ರಾಜೀನಾಮೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಸ್ಪಷ್ಟವಾದ ಮಧ್ಯಂತರ ಆದೇಶವನ್ನು ನೀಡಿದೆ ಎಂದು ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯ ಗೊಂದಲಗಳಿಗೆ ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ಸ್ಪಷ್ಟವಾದ ಪರಿಹಾರ ದೊರೆತಂತಾಗಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಲಾಗುವುದು ಎಂದರು.

ಶಾಸಕರು ನೀಡಿರುವ ರಾಜೀನಾಮೆ ವಿಚಾರದಲ್ಲಿ ಸಭಾಧ್ಯಕ್ಷರು ವಿಳಂಬ ಮಾಡದೆ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಾಜೀನಾಮೆ ನೀಡಿರುವ ಶಾಸಕರಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒತ್ತಾಯ ಮಾಡುವಂತಿಲ್ಲ ಎಂದು ಹೇಳಿರುವುದು ಅವರಿಗೆ ರಿಲೀಫ್ ಸಿಕ್ಕಂತಾಗಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳುವುದು ಅಥವಾ ಪಾಲ್ಗೊಳ್ಳದಿರುವುದು ಶಾಸಕರಿಗೆ ಸೇರಿದ್ದು ಎಂದರು.

ನಾಳೆ ವಿಧಾನಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ವಿಶ್ವಾಸಮತಯಾಚನೆ ವಿಚಾರ ಪ್ರಸ್ತಾಪವಾಗಲಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ತಾವು ಕೋರುವ ವಿಶ್ವಾಸಮತಯಾಚನೆಗೆ ಸಂಬಂಧಿಸಿದಂತೆ ಅನಿಸಿಕೆಯನ್ನು ವ್ಯಕ್ತಪಡಿಸಬಹುದಾಗಿದೆ ಎಂದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin