ಅಭಿವೃದ್ಧಿಯೇ ನನಗೆ ಗೆಲುವಿನ ಶ್ರೀರಕ್ಷೆ : ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.30- ಕ್ಷೇತ್ರದ ಸಮಗ್ರ ಅಭಿವೃದ್ದಿಯನ್ನೇ ಗುರಿಯಾಗಿ ಟ್ಟುಕೊಂಡಿರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ ಪರ ಮತದಾರರಿಂದ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ತವಾಗುತ್ತಿದೆ. ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರೊಂದಿಗೆ ಇಂದು ಜೆ.ಸಿ.ನಗರ ಬಡಾವಣೆಯಲ್ಲಿ ಮತದಾರರ ಮನೆ ಮನೆಗೆ ತೆರಳಿ, ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯಾಗಿರುವ ತಮ್ಮನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಅವರು ಮನವಿ ಮಾಡಿದರು.

ಬೆಳಗ್ಗೆಯೇ ಜೆ.ಸಾರ್ವಜನಿಕರು, ಹಿರಿಯರು, ವಿದ್ಯಾರ್ಥಿಗಳು, ಕಾರ್ಮಿಕರು, ಆಟೋ ಚಾಲಕರು ಸೇರಿದಂತೆ ಮತ್ತಿತರರನ್ನು ಭೇಟಿ ಮಾಡಿ, ಸ್ಥಿರ ಸರ್ಕಾರ ಮತ್ತು ಅಭಿವೃದ್ದಿಗಾಗಿ ಬಿಜೆಪಿ ಕೈ ಹಿಡಿಯಬೇಕೆಂದು ಕೋರಿದರು.  ಗೋಪಾಲಯ್ಯ ಮಾತನಾಡಿ, ನನಗೆ ಎಲ್ಲ ವರ್ಗದ ಮತದಾರರು ನಿರೀಕ್ಷೆಗೂ ಮೀರಿದ ಬೆಂಬಲ ನೀಡುತ್ತಿದ್ದಾರೆ. ಅಲ್ಲದೆ ಕಾರ್ಯಕರ್ತರು ಕೂಡ ಗೆಲುವಿಗೆ ಶ್ರಮಿಸುತ್ತಿರುವುದು ನನಗೆ ಹೆಚ್ಚಿನ ಆತ್ಮವಿಶ್ವಾಸ ತಂದಿದೆ ಎಂದರು.

ನಮಗೆ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಎರಡು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡಿದ್ದಾರೆ. ಹೀಗಾಗಿ ಈ ಉಪಚುನಾವಣೆಯಲ್ಲಿ ನಮಗೆ ಜನ ಮತ ಹಾಕಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರಿಂದ ಇನ್ನಷ್ಟು ಆನೆಬಲ ಬಂದಂತಾಗಿದ್ದು, ಗೆಲುವಿನ ವಿಶ್ವಾಸವನ್ನು ಇಮ್ಮಡಿಗೊಳಿಸಿದ್ದಾರೆ. ಇಂದು ಬೆಳಗ್ಗೆ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ತಮ್ಮ ಪ್ರಚಾರವನ್ನು ಆರಂಭಿಸಿದ ಅವರಿಗೆ ಎಲ್ಲೆಡೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ.

ಹೋದಕಡೆಯಲೆಲ್ಲ ಅಭಿವೃದ್ದಿ ಮಂತ್ರವನ್ನೇ ಪಠಿಸುತ್ತಿರುವ ಕೆ.ಗೋಪಾಲಯ್ಯ ಅವರ ಮತ ಪ್ರಚಾರ ಮತದಾರರನ್ನು ಸೆಳೆಯು ತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನವರ ನೇತೃತ್ವದ ಬಿಜೆಪಿ ಸರ್ಕಾರ ಇರುವುದರಿಂದ ಮತದಾರರು ಕೂಡ ನಮ್ಮ ಪಕ್ಷದ ಬಗ್ಗೆ ಒಲವು ತೋರುತ್ತಿದ್ದಾರೆ.

Facebook Comments