ಪಟಾಕಿ ಸಿಡಿಸದೆ ದೀಪ ಹಚ್ಚುವ ಮೂಲಕ ಹಬ್ಬ ಆಚರಿಸಲು : ಸಚಿವ ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.10- ಪಟಾಕಿ ಸಿಡಿಸದೆ ದೀಪ ಹಚ್ಚುವ ಮೂಲಕ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಕೆ.ಗೋಪಾಲಯ್ಯ ಸಲಹೆ ನೀಡಿದ್ದಾರೆ.  ಬಿಜೆಪಿ ಯುವ ಮುಖಂಡ ಅವಿನ್ ಆರಾಧ್ಯ ನೇತೃತ್ವದಲ್ಲಿ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕ ವಿತರಣೆ ಮಾಡಿ ಅವರು ಮಾತನಾಡಿದರು.

ನೇತ್ರದಾನ ಶಿಬಿರ ಮಾಡಿ ಇಂದು ನಿಮ್ಮೆಲ್ಲರಿಗೂ ಉಚಿತವಾಗಿ ಕನ್ನಡಕ ವಿತರಣೆ ಮಾಡುತ್ತಿರುವುದು ಪುಣ್ಯದ ಕೆಲಸ ವಾಗಿದ್ದು, ಎಲ್ಲರೂ ಇದರ ಪ್ರಯೋಜನ ಪಡೆದು ಉತ್ತಮವಾಗಿ ಜೀವನ ಸಾಗಿಸಿ ಎಂದು ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು.

ಅವಿನ್ ಆರಾಧ್ಯ ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕರೆಗೆ ಓಗೊಟ್ಟು ಎಲ್ಲರೂ ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಬೇಕು. ವಾಯು ಮಾಲಿನ್ಯ, ಶಬ್ಧ ಮಾಲಿನ್ಯ ಆಗದ ಹಾಗೆ ಮುನ್ನೆಚ್ಚರಿಕೆ ವಹಿಸಿ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿ ಆಚರಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ದೀಪಾವಳಿ ಹಬ್ಬದ ಪ್ರಯುಕ್ತ 130 ಅದರಲ್ಲಿ 35 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿಸಿ 68 ಜನರಿಗೆ ಉಚಿತವಾಗಿ ಹೆಚ್ಚು ಜನಗಳಿಗೆ ಕನ್ನಡಕ ವಿತರಣೆ ಮಾಡಲಾಯಿತು.

ಬಿಬಿಎಂಪಿ ಮಾಜಿ ಉಪ ಮಹಾಪೌರರಾದ ಎಸ್. ಹರೀಶ್, ವೆಂಕಟೇಶ್, ಸೆನೆಟ್ ರವಿ, ರೈತ ಮೋರ್ಚಾ ಅಧ್ಯಕ್ಷ ಬೋರೆಗೌಡ್ರು, ಆರ್.ಮಂಜುನಾಥ್, ಪ್ರಸನ್ನ ,ರಾಮಪ್ಪ ಕುಮಾರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Facebook Comments