ಹಾಸನದ ಅಭಿವೃದ್ಧಿಗೆ ವಿಶೇಷ ಒತ್ತು : ಸಚಿವ ಕೆ .ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ದಾಸರಹಳ್ಳಿ, ಜೂ.3- ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ .ಗೋಪಾಲಯ್ಯ ತಿಳಿಸಿದ್ದಾರೆ.  ರಾಜಗೋಪಾಲ ನಗರ ವಾರ್ಡಿನ ಕೆಟಿಜಿ ಕಾಲೇಜು ಮೈದಾನದಲ್ಲಿ ಬಿಜೆಪಿ ಮುಖಂಡ ನರಸಿಂಹಮೂರ್ತಿ ನೇತೃತ್ವದಲ್ಲಿ 3 ಸಾವಿರ ಬಡ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವನಾಗಿ ಯಾರೂ ಹಸಿವಿನಿಂದ ಬಳಲದಂತೆ ಸಮರ್ಪಕವಾಗಿ ಪಡಿತರ ವಿತರಣೆ ಮಾಡಿದ್ದು, ನನ್ನ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಸನ ಜಿಲ್ಲಾ ಉಸ್ತುವಾರಿ ಹೊಣೆ ವಹಿಸಿದ್ದಾರೆ ಎಂದರು. ಸಂಸದ, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು. ರೈತಾಪಿ ಕುಟುಂಬಗಳ ಅಭ್ಯುದಯಕ್ಕೆ ದುಡಿಯ ಲಾಗುವುದು.ಜನಪರ ಕಾರ್ಯಗಳನ್ನು ನಿರ್ವಹಿಸಲು ಹಾಸನಾಂಬೆ ಶಕ್ತಿಯನ್ನು ದಯ ಪಾ ಲಿಸಲಿದ್ದಾಳೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಡಿತರ ಚೀಟಿ ರಹಿತ ನಾಗರಿಕರು ಆಧಾರ್ ಕಾರ್ಡ್ ತೋರಿಸಿ ಪಡಿತರ ಪಡೆದುಕೊಳ್ಳುವಂತೆ ಮನವಿ ಮಾಡಿದ ಅವರು, ಕೊರೊನಾ ಸಂತ್ರಸ್ತರ ಹಸಿವು ನೀಗಿಸಲು ಸರ್ಕಾರ ಶ್ರಮಿಸುತ್ತಿದೆ. ಪೂರಕವಾಗಿ ಬಿಜೆಪಿ ಮುಖಂಡರು ಕ್ಷೇತ್ರದಲ್ಲಿ ಮಾಜಿ ಶಾಸಕ ಮುನಿರಾಜು ಅವರ ಮುಂದಾಳತ್ವ ದಲ್ಲಿ ಕೂಲಿ ಕಾರ್ಮಿಕರು, ಕಡುಬಡವರು ನಿರಾಶ್ರಿತರನ್ನು ಗುರುತಿಸಿ ದಿನಸಿ ಕಿಟ್ ವಿತರಿಸುವ ಮೂಲಕ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಾಜಿ ಶಾಸಕ ಮುನಿರಾಜು ಮಾತನಾಡಿ, ಕ್ಷೇತ್ರದಾದ್ಯಂತ ಬಿಎಸ್ ವೈ ಕ್ಯಾಂಟೀನ್‍ಗಳನ್ನು ತೆರೆದು ಲಾಕ್ ಡೌನ್ ಅವಧಿಯಲ್ಲಿ ನಿರಂತರ ವಾಗಿ ಅಸಹಾಯಕರ ಹಸಿವು ನೀಗಿಸುವ ಕೆಲಸ ಮಾಡಲಾಗಿದೆ. ಜತೆಗೆ ಲಕ್ಷಾಂತರ ಕಡು ಬಡವರಿಗೆ ದಿನಸಿ ಕಿಟ್ ವಿತರಿಸಿಲಾಗಿದೆ. ಪ್ರತಿ ವಾರ್ಡಿ ನಲ್ಲಿಯೂ ಸ್ಥಳೀಯ ಬಿಜೆಪಿ ಮುಖಂಡರು ಬಡವರಿಗೆ ನೆರವಾಗುತ್ತಿದ್ದಾರೆ ಎಂದರು. ಬಿಜೆಪಿ ಮುಖಂಡರಾದ ನರಸಿಂಹಮೂರ್ತಿ, ಗೋಪಾಲಕೃಷ್ಣ, ನಾರಾಯಣಸ್ವಾಮಿ ವಿಜಯ್ ಕುಮಾರ್, ರಾಮಣ್ಣ ಮೊದಲಾದವರಿದ್ದರು.

Facebook Comments