1 ತಿಂಗಳಲ್ಲಿ ಶುದ್ಧ ನೀರಿನ ಘಟಕಗಳ ದುರಸ್ತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.26- ಶುದ್ದ ಕುಡಿಯುವ ನೀರಿನ ಘಟಕ ಗಳನ್ನು ಒಂದು ತಿಂಗಳೊಳಗೆ ದುರಸ್ತಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಬಾಗಲಕೋಟೆ, ಬೆಳಗಾವಿ,ಧಾರವಾಡ, ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿರುವ  ಮಾಹಿತಿ ಇದ್ದು , ಇನ್ನು ತಿಂಗಳೊಳಗೆ ಇರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಬೇಕು ಎಂದರು.

ಸ್ಥಗಿತವಾಗಿರುವ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯ ತ್ವರಿತವಾಗಿ ಮಾಡಬೇಕು. ಗ್ರಾಮೀಣ ಭಾಗದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮರ್ಪಕವಾಗಿ ಕುಡಿಯು ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಗ್ರಾಮೀಣಾಭಿವೃದ್ದಿ ಪಂಚಾಯತ್ ರಾಜ್ ಇಲಾಖೆಯ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Facebook Comments