ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸುವುದೇ ನಮ್ಮಮೊದಲ ಆದ್ಯತೆ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.20-ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮಮೊದಲ ಆದ್ಯತೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.

ನನ್ನ ಮೇಲೆ ನಂಬಿಕೆಯಿಟ್ಟು ಸಚಿವ ಸ್ಥಾನದ ಜವಾಬ್ದಾರಿ ನೀಡಿರುವ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಭಾರಿಯಾಗಿದ್ದೇನೆ ಎಂದರು.

ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ, ಬಿಜೆಪಿಗೆ ಸೇರ್ಪಡೆಯಾಗಿ 12 ವರ್ಷ ಕಳೆದಿದೆ. ಪಕ್ಷ ನನ್ನ ಸೇವೆ ಗುರುತಿಸಿ ಸಚಿವ ಸ್ಥಾನದ ಜವಾಬ್ದಾರಿ ನೀಡಿದೆ. ಯಾವುದೇ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

Facebook Comments

Sri Raghav

Admin