ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕರ್ತವ್ಯಕ್ಕೆ ಹಾಜರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.30- ನನ್ನ ಕುಟುಂಬದ ಹಲವು ಸದಸ್ಯರಿಗೆ ಕೊರೊನಾ ಸೋಂಕು ದೃಢಪಟ್ಟ ನಂತರ ಕಳೆದ ಎಂಟು ದಿನಗಳಿಂದ ಗೃಹ ಕ್ವಾರಂಟೈನ್‍ನಲ್ಲಿದ್ದೇನೆ. ಈಗ ಮತ್ತೆ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಬಂದಿದೆ. ಇಂದು ಕರ್ತವ್ಯದಲ್ಲಿ ತೊಡಗಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ನಿಮ್ಮೆಲ್ಲರ ಹಾರೈಕೆಯಿಂದ ನನ್ನ ಕುಟುಂಬ ಸದಸ್ಯರು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯಸರ್ಕಾರ ಬದ್ಧವಾಗಿದ್ದು, ನಿಯಂತ್ರಿಸುವ ನಿಟ್ಟಿನಲ್ಲೂ ಕೂಡ ಶತ ಪ್ರಯತ್ನ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

Facebook Comments