ಕೊರೋನಾದಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡುವವರಿಗೆ 5000 ರೂ. ಪ್ರೋತ್ಸಾಹಧನ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಗುಣಮುಖರಾಗಿರುವ ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡಲು ಸಚಿವ ಸುಧಾಕರ್ ಮನವಿ ಮಾಡಿದ್ದಾರೆ. ಪ್ಲಾಸ್ಮಾದಾನ ಮಾಡುವವರಿಗೆ ಸರ್ಕಾರದಿಂದ 5000 ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದೆ.

ಇಂದು ಸುದ್ದಿಘೋಷಿಯಲ್ಲಿ ಮಾತನಾಡಿದ ಮಾತನಾಡಿದ ಅವರು ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು 17,370 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಐಸಿಯು ನಲ್ಲಿ 597 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹವರ ಚಿಕಿತ್ಸೆಗೆ ಗುಣಮುಖರಾದವರ ಪ್ಲಾಸ್ಮಾ ಅತ್ಯಂತ ಪರಿಣಾಮಕಾರಿಯಾಗಿದ್ದು, ಪ್ಲಾಸ್ಮಾ ದಾನ ಮಾಡುವಂತೆ ಸಚಿವರು ಮನವಿ ಮಾಡಿದ್ದಾರೆ.

ಬೆಂಗಳೂರಿನ ಎಲ್ಲಾ ವಲಯಗಳ ಬೂತ್ ಕಾರ್ಯಪಡೆಯ ನೋಡಲ್ ಅಧಿಕಾರಿಗಳೊಂದಿಗೆ ಸಚಿವ ಸುಧಾಕರ್ ಸಮಾಲೋಚನೆ. 2 ದಿನಗಳಲ್ಲಿ ಕಾರ್ಯಪಡೆ ರಚಿಸಲು ನಿರ್ದೇಶನ ನೀಡಲಾಗಿದೆ.

ಸದಸ್ಯರ ಕರ್ತವ್ಯ ಮತ್ತು ನಿರ್ವಹಿಸಬೇಕಾದ ಕೆಲಸಗಳ ಕುರಿತು ಮಾರ್ಗಸೂಚಿ. ಲಾಕ್ ಡೌನ್ ಅವಧಿಯಲ್ಲಿ ಮನೆಮನೆ ಸಮೀಕ್ಷೆ ನಡೆಸಿ 60 ವರ್ಷ ಮೇಲ್ಪಟ್ಟವರಿಗೆ ರಿವರ್ಸ್ ಐಸೋಲೇಶನ್ ಮಾಡಲು ಸೂಚನೆ. ಹಾಸಿಗೆ ವ್ಯವಸ್ಥೆ, ಆಂಬುಲೆನ್ಸ್ ಒದಗಿಸುವುದು ಮುಂತಾದ ನಿರ್ಧಾರಗಳನ್ನು ಕಾರ್ಯಪಡೆ ತೆಗೆದುಕೊಳ್ಳುವುದು ಎಂದರು. .

ಕೋವಿಡ್ ನಿರ್ವಹಣೆ ಮತ್ತು ನಿಗ್ರಹಕ್ಕೆ ಸರ್ಕಾರದ ಜೊತೆ ಕೈಜೋಡಿಸುವಂತೆ ನಾಗರಿಕರಲ್ಲಿ ಸಚಿವರ ಮನವಿ. ಸಹಕಾರ ನೀಡುತ್ತಿರುವ ಸಂಘ ಸಂಸ್ಥೆಗಳಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು.

ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದು ಇಂದಿಗೆ 9 ಲಕ್ಷ ಕೋವಿಡ್ ಟೆಸ್ಟ್ ಗಳು ಪೂರ್ಣಗೊಳಿಸಲಾಗಿದೆ. ಇಂದೇ 22,204 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಇಂದು 3000 ಕ್ಕೂ ಅಧಿಕ ಸೋಂಕಿತರು ಪತ್ತೆಯಾಗಿದ್ದು , ಬೆಂಗಳೂರಿನಲ್ಲಿ 1975 ಮಂದಿಗೆ ಕೊರೋನಾ ದೃಢಪಟ್ಟಿದೆ.

# 25 ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಚಿವ ಸುಧಾಕರ್ ಸಭೆ :
ಕೋವಿಡ್ ಟೆಸ್ಟ್ ಮಾಡದ ಖಾಸಗಿ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದ್ದು, . ಲ್ಯಾಬ್ ಗಳಲ್ಲಿ ಉಪಕರಣಗಳ ಕೊರತೆ ಪೂರೈಸಲು ಸಚಿವರ ನಿರ್ದೇಶನ ನೀಡಲಾಗಿದೆ. . 1 ವಾರದಲ್ಲಿ ಎಲ್ಲಾ ಲ್ಯಾಬ್ ಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು, ಪ್ರತಿದಿನ ಕನಿಷ್ಠ 500 ಟೆಸ್ಟ್ ನಡೆಸಲು ಖಾಸಗಿ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದರು . 1 ವಾರದೊಳಗೆ 25,000 – 30,000 ಟೆಸ್ಟ್ ನಡೆಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು .

ಪ್ರತಿಭಟನೆ ನಡೆಸುತ್ತಿರುವ ದಾವಣಗೆರೆಯ ಜೆಜೆ‌ಎಂ‌ಎಂಸಿ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನ 3-4 ದಿನಗಳಲ್ಲಿ ಬಿಡುಗಡೆ. ಮಾಡಲಾಗುವುದು, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು ಅರಿಯರ್ಸ್ ಸಮೇತ ಪಾವತಿಗೆ ಕ್ರಮ ಸಚಿವ ಸುಧಾಕರ್ ತಿಳಿಸಿದರು.

Facebook Comments

Sri Raghav

Admin