ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪನವರ ಆರೋಗ್ಯದಲ್ಲಿ ಏರುಪೇರು

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಜು.5- ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾಗಿದ್ದು ಅಸ್ವಸ್ಥಗೊಂಡಿದ್ದಾರೆ.
ಕಳೆದ ರಾತ್ರಿ ಅವರು, ಮನೆಯಲ್ಲಿ ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ನೀಡಿದ ಬಳಿಕ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದ್ಯೊಯುವ ಸಾಧ್ಯತೆಯಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾಗರದಲ್ಲಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ದಿಢೀರ್ ಅನಾರೋಗ್ಯ ಎದುರಾದ ಹಿನ್ನೆಲೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

Facebook Comments