ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರಿಂದ ಜನಸಂಪರ್ಕ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.19- ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಮಾಸಿಕ ಜನಸಂಪರ್ಕ ಸಭೆ ನಡೆಸಲು ಮುಂದಾಗಿದ್ದಾರೆ. ಪ್ರತಿ ತಿಂಗಳ ನಾಲ್ಕನೇ ಶನಿವಾರದ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ನಗರಾದ್ಯಂತ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಥವಾ ಯಾವುದೇ ಮಾಹಿತಿ ಪಡೆಯಲು ಪೊಲೀಸ್ ಠಾಣೆಗೆ ಭೇಟಿ ನೀಡಬಹುದೆಂದು ಆಯುಕ್ತರು ತಿಳಿಸಿದ್ದಾರೆ.

ಕಮಲ್‍ಪಂತ್ ಅವರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುವ ಸಂದರ್ಭದಲ್ಲಿ ಮಾತನಾಡುತ್ತಾ, ಕಾಲಕಾಲಕ್ಕೆ ಜನಸಂಪರ್ಕ ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದರು. ಅದರಂತೆ ಈಗ ಮಾಸಿಕ ಜನಸಂಪರ್ಕ ಸಭೆ ಆಯೋಜಿಸಲಾಗುತ್ತಿದೆ.

ನಿಗದಿತ ದಿನಾಂಕದಂದು ಪೊಲೀಸ್ ಇನ್ಸ್‍ಪೆಕ್ಟರ್‍ರಿಂದ ಆಯುಕ್ತರವರೆಗೆ ಎಲ್ಲಾ ಹಿರಿಯ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗೆ ಲಭ್ಯ ಇರುತ್ತಾರೆ. ಬಾಕಿ ಇರುವ ಪ್ರಕರಣಗಳ ಪ್ರಗತಿ, ದೂರುಗಳ ಪರಿಹಾರ, ಸಾಮಾನ್ಯ ಹಾಗೂ ಇತರೆ ಮಾಹಿತಿಗಳನ್ನು ಪಡೆಯಲು ಆ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

Facebook Comments