ಕಫ್ರ್ಯೂ ಉಲ್ಲಂಘಿಸಿದರೆ ಕಠಿಣ ಕ್ರಮ: ಕಮಲ್ ಪಂತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.23- ಎರಡು ದಿನಗಳ ವಾರಾಂತ್ಯದ ಕಫ್ರ್ಯೂ ರಾತ್ರಿ 9 ಗಂಟೆಯಿಂದ ಪ್ರಾರಂಭವಾಗಲಿದ್ದು, ಕಫ್ರ್ಯೂ ಸಂದರ್ಭದಲ್ಲಿ ಯಾರೇ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ನಗರದಾದ್ಯಂತ ಕಫ್ರ್ಯೂ ಇರುತ್ತದೆ. ಈ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡಬಾರದು. ಸರ್ಕಾರದಿಂದ ವಿನಾಯ್ತಿ ನೀಡಿರುವವರಿಗೆ ಮಾತ್ರ ಓಡಾಡಲು ಅವಕಾಶವಿದೆ ಎಂದರು.

ನಾವು ಈ ಬಾರಿ ಯಾರಿಗೂ ಪಾಸ್ ಕೊಟ್ಟಿಲ್ಲ. ನಮ್ಮ ಸಿಬ್ಬಂದಿ ಹಾಗೂ ಅಕಾರಿಗಳು ಪಾಳಿಗಳಲ್ಲಿ ಕೆಲಸ ಮಾಡುತ್ತಾರೆ. ಎಲ್ಲ ಕಡೆ ಬಿಗಿ ಕ್ರಮ ಮಾಡಿಕೊಂಡಿದ್ದೇವೆ ಎಂದು ಆಯುಕ್ತರು ತಿಳಿಸಿದರು.

Facebook Comments