ಶಾಂತಿಯುತ ಮತದಾನಕ್ಕಾಗಿ ವ್ಯಾಪಕ ಬಂದೋಬಸ್ತ್ : ಪೊಲೀಸ್ ಆಯುಕ್ತ ಕಮಲ್‍ಪಂಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.2- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕಾಗಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಹೇಳಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಅರ್ಧ ಕಿಲೋ ಮೀಟರ್ ಅಂತರದಲ್ಲಿ ಒಂದು ಪೊಲೀಸ್ ವಾಹನ ಇರುತ್ತದೆ. ಅದೇ ರೀತಿ ಕ್ಷೇತ್ರ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.

ಸ್ಥಳೀಯ ಪೊಲೀಸರು, ಚೀತಾ, ಹೊಯ್ಸಳ, 40 ಪ್ಲೈಯಿಂಗ್ ಸ್ಕಾಡ್‍ಗಳು, ಕೆಎಸ್‍ಆರ್‍ಪಿ, ಸಿಎಆರ್, ಸಿಐಎಸ್‍ಎಫ್ ಕಂಪೆನಿಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕ್ಷೇತ್ರವರನ್ನು ಹೊರತು ಪಡಿಸಿ ಹೊರಗಿನಿಂದ ಯಾರಾದರೂ ಬಂದು ನೆಲೆಸಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

Facebook Comments