ಸಾರಿಗೆ ನೌಕರರ ಮುಷ್ಕರ, ಬೆಂಗಳೂರಿನಾದ್ಯಂತ ಬಿಗಿ ಬಂದೋಬಸ್ತ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.7- ಸಾರಿಗೆ ನಿಗಮಗಳ ನೌಕರರು ಮುಷ್ಕರ ಕೈಗೊಂಡಿರುವುದರಿಂದ ನಗರಾದ್ಯಂತ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಬೆಂಗಳೂರು ನಗರದ ಪೆÇಲೀಸ್ ಕಮೀಷನರ್ ಕಮಲ್‍ಪಂತ್ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ ಸಿಎಆರ್, ಕೆಎಸ್‍ಆರ್‍ಪಿ ತುಕಡಿಗಳನ್ನು ಬಂದೋಬಸ್ತ್‍ಗಾಗಿ ನಗರದಲ್ಲಿ ನಿಯೋಜಿಸಲಾಗಿದೆ ಎಂದು ವಿವರಿಸಿದರು.

ನಗರದ ಎಂಟು ವಿಭಾಗದ ಡಿಸಿಪಿಗಳು, ಹೆಚ್ಚುವರಿ ಪೊಲೀಸ್ ಆಯುಕ್ತರುಗಳು, ಸಂಚಾರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಬೆಳಗ್ಗೆಯಿಂದಲೇ ಗಸ್ತಿನಲ್ಲಿದ್ದಾರೆ.ಬಸ್ ಡಿಪೋಗಳು, ನಿಲ್ದಾಣಗಳಲ್ಲಿ ಬಿಗಿಯಾದ ಬಂದೋಬಸ್ತ್ ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಅಲ್ಲಿ ಮೊಕ್ಕಾಂ ಹೂಡಿದ್ದಾರೆ.

ಒಟ್ಟಾರೆ ಸಣ್ಣಪುಟ್ಟ ಘಟನೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು.ಯಾರಾದರೂ ರಸ್ತೆಗಿಳಿದು ಪ್ರತಿಭಟನೆ ನಡೆಸಿದರೆ ಅವರನ್ನು ಬಂಧಿಸಲಾಗುವುದು ಎಂದು ಈ ಸಂದರ್ಭದಲ್ಲಿ ಅವರು ಎಚ್ಚರಿಕೆ ನೀಡಿದರು.

Facebook Comments