ಉತ್ತರ ಪ್ರದೇಶದ ಸಚಿವೆ ಕಮಲಾರಾಣಿ ಕೊರೊನಾಗೆ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಲಖನೌ, ಆ.2- ಉತ್ತರ ಪ್ರದೇಶದ ಸಂಪುಟ ಸಚಿವೆ ಕಮಲಾರಾಣಿ ವರುಣ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.ಬಿಜೆಪಿಯ ಹಿರಿಯ ನಾಯಕಿಯಾಗಿದ್ದ ಕಮಲಾರಾಣಿ ಅವರು ಕಳೆದ ಹಲವು ದಿನಗಳ ಹಿಂದೆ ಕೊರೊನಾ ಸೋಂಕಿನಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇದರಿಂದಾಗಿ ಇಂದು ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

1958 ಮೇ 3ರಂದು ಜನಿಸಿದ್ದ ಕಮಲಾರಾಣಿ ಅವರು 1975ರಲ್ಲಿ ಕಿಶನ್‍ಲಾಲ್ ವರುಣ್ ಅವರನ್ನು ವಿವಾಹವಾಗಿದ್ದರು. ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದ ಇವರು ಮುನ್ಸಿಪಲ್ ಕೌನ್ಸಿಲ್‍ನಿಂದ ಹಂತ ಹಂತವಾಗಿ ರಾಜಕೀಯವಾಗಿ ಮೇಲೆ ಬಂದಿದ್ದರು.

ಕಳೆದ 1996 ಮತ್ತು 1998ರಲ್ಲಿ ಲೋಕಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದ ಕಮಲಾರಾಣಿ ಖಾನ್ಪುರ ಕ್ಷೇತ್ರದಿಂದ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು ಭಾರೀ ಬಹುಮತದಿಂದ ಗೆಲುವು ಸಾಧಿಸಿದ್ದರು. ನಂತರ ಅವರು ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು.

Facebook Comments

Sri Raghav

Admin