ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದ ಕಮಲಾ ಹ್ಯಾರಿಸ್

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್, ಡಿ.4- ಭಾರತ ಮೂಲದ ಅಮೆರಿಕ ಸೆನೆಟರ್ (ಸಂಸದೆ) ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಅವರ ಈ ನಿರ್ಧಾರದಿಂದ ಡೆಮಾಕ್ರೆಟಿಕ್ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ.

ಟ್ವೀಟ್ ಮಾಡುವ ಮೂಲಕ ತಮ್ಮ ರಾಜಕೀಯ ನಡೆಯನ್ನು ಸ್ಪಷ್ಟಪಡಿಸಿರುವ ಕಮಲಾ ಹ್ಯಾರೀಸ್ ತಾವು ಅಧ್ಯಕ್ಷೀಯ ಸ್ಪರ್ಧೆ ಯಿಂದ ಹಿಂದೆ ಸರಿಯುವುದಾಗಿ ತಿಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 2020ರ ವೇಳೆಗೆ ವಿಶ್ವದ ಅಮೆರಿಕ ಅಧ್ಯಕ್ಷೀಯ ಪದವಿಗೆ ಚುನಾವಣೆ ನಡೆಯಲಿದೆ.

ರಿಪಬ್ಲಿಕ್ ಪಕ್ಷದಿಂದ ಪ್ರಸ್ತುತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಅವಗೆ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ. ಮತ್ತೊಂದು ಪ್ರಮುಖ ಪಕ್ಷವಾದ ಡೆಮಾಕ್ರೆಟಿಕ್ ಪಕ್ಷದಿಂದ ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್ ಸರ್ಧೆ ನಡೆಸುವವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದರು. ಆದರೆ ಈಗ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಅತ್ಯಂತ ಪ್ರಭಾವಿ ಮಹಿಳಾ ಸೆನೆಟರ್ ಆಗಿರುವ ಕಮಲಾ ಸ್ಪರ್ಧಾ ಕಣದಿಂದ ಹಿಂದಕ್ಕೆ ಸರಿದಿರುವುದರಿಂದ ಡೆಮಾಕ್ರೆಟಿಕ್ ಪಕ್ಷದ ಮುಖಂಡರಲ್ಲಿ ಭಾರೀ ನಿರಾಸೆಗೆ ಕಾರಣವಾಗಿದೆ.

Facebook Comments