ಕಮಲ್‌ ‘ಹಿಂದೂ ಭಯೋತ್ಪಾದಕ’ ಹೇಳಿಕೆ ವಿರುದ್ಧದ ದೂರು ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್‌

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 15- ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೂಡ್ಸೆ ಸ್ವತಂತ್ರ ಭಾರತದ ಪ್ರಥಮ ಹಿಂದೂ ಭಯೋತ್ಪಾದಕ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಮತ್ತು ರಾಜಕಾರಣಿ ಕಮಲ ಹಾಸನ್ ಹೇಳಿಕೆ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಾನ್ಯ ಮಾಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಕಮಲ ಹಾಸನ್ ಅವರ ಈ ಹೇಳಿಕೆ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಚುನಾವಣೆಯಲ್ಲಿ ಪ್ರಚಾರಕ್ಕಾಗಿ ಧರ್ಮವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಮಕ್ಕಳ್ ನೀಧಿ ಮಯ್ಯಂ (ಎಂಎನ್‍ಎಂ) ಪಕ್ಷದ ಸಂಸ್ಥಾಪಕ ಕಮಲ ಹಾಸನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡ ಮತ್ತು ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದರು.

ಧರ್ಮವನ್ನು ದುರುಪಯೋಗ ಮಾಡಿಕೊಂಡಿರುವ ಎಂಎನ್‍ಎಂ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಯಿಂದ ಅನರ್ಹಗೊಳಿಸಬೇಕು ಮತ್ತು ಈ ಪಕ್ಷದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಪಾಧ್ಯಾಯ ಐಪಿಎಲ್‍ನಲ್ಲಿ ಮನವಿ ಮಾಡಿದ್ದರು.

ಈ ಅರ್ಜಿ ಕುರಿತು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಪಿಐಎಲ್ ಅನ್ನು ಮಾನ್ಯ ಮಾಡಲು ನಿರಾಕರಿಸಿ ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಆಯೋಗಕ್ಕೆ ಸೂಚನೆ ನೀಡಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ